ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಅಪಘಾತ – ಕ್ಯಾಂಟರ್‌ನಲ್ಲಿ ಸಿಲುಕಿ ನರಳಾಡಿದ ಚಾಲಕ

Twitter
Facebook
LinkedIn
WhatsApp
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಅಪಘಾತ – ಕ್ಯಾಂಟರ್‌ನಲ್ಲಿ ಸಿಲುಕಿ ನರಳಾಡಿದ ಚಾಲಕ

ಮಂಡ್ಯ: ಹೆದ್ದಾರಿಗೆ ವೈಟ್ ಟ್ಯಾಪಿಂಗ್ ಹಾಕುವ ಲಾರಿಗೆ (Lorry) ಕ್ಯಾಂಟರ್ (Canter Truck) ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಜ್ಜುಗುಜ್ಜಾಗಿ ಕ್ಯಾಂಟರ್ ಒಳಭಾಗದಲ್ಲಿ ಚಾಲಕ ಸಿಲುಕಿ ನರಳಾಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ (Bengaluru-Mysuru Express Highway) ನಡೆದಿದೆ.

ಕಳೆದ ರಾತ್ರಿ ಮಂಡ್ಯದ ಗೆಜ್ಜಲುಗೆರೆಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಗೆ ಕಾರ್ಮಿಕರು ವೈಟ್ ಟ್ಯಾಪಿಂಗ್‍ನ್ನು ಹಾಕುತ್ತಿದ್ದರು. ಈ ವೇಳೆ ಕ್ಯಾಂಟರ್ ಟ್ಯಾಂಪಿಗ್ ತುಂಬಿದ್ದ ಲಾರಿಗೆ ಹಿಂದೆಯಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಜ್ಜುಗುಜ್ಜಾಗಿದ್ದು, ಕ್ಯಾಂಟರ್ ಒಳಭಾಗದಲ್ಲಿ ಚಾಲಕ ಸಿಲುಕಿ ನರಳಾಡಿದ್ದಾನೆ. ಈ ವೇಳೆ ವೈಟ್ ಟ್ಯಾಪಿಂಗ್ ಹಾಕುತ್ತಿದ್ದ ಕಾರ್ಮಿಕನಿಗೂ ಗಂಭೀರ ಗಾಯಗಳಾಗಿವೆ.

ಬಳಿಕ ಸ್ಥಳದಲ್ಲಿ ಇದ್ದ ಸ್ಥಳೀಯರು ಕ್ಯಾಂಟರ್ ಒಳಭಾಗದಲ್ಲಿ ಸಿಲುಕಿದ್ದ ಚಾಲಕನನ್ನು ಹೊರತೆಗೆದು ಬಳಿಕ ಚಾಲಕ ಹಾಗೂ ಕಾರ್ಮಿಕನನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಾಮಗಾರಿಯ ವೇಳೆ ಸೂಚನ ಫಲಕವನ್ನು ಅಳವಡಿಕೆ ಮಾಡದೇ ಇರುವುದು ಈ ಅಪಘಾತಕ್ಕೆ ಕಾರಣವಾಗಿದೆ. ಹೆದ್ದಾರಿ ಕಾಮಗಾರಿ ಆರಂಭವಾದ ದಿನದಿಂದಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಕಾರಣ ಈ ರೀತಿಯ ಘಟನೆಗಳು ಪದೇ ಪದೇ ಜರುಗುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ