ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!

Twitter
Facebook
LinkedIn
WhatsApp
ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!

ಬೆಂಗಳೂರು: ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫಾರ್ಮ್​​​ ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​​ ಪಾರ್ಟಿ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿದೆ. ಭಾನುವಾರ ಸಂಜೆಯಿಂದ ನಡೆಯುತ್ತಿದ್ದ ಪಾರ್ಟಿಯ ಕುರಿತು ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ನಸುಕಿನಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಪಾರ್ಟಿಯಲ್ಲಿ ಮಾದಕ ಪದಾರ್ಥ ಪತ್ತೆಯಾಗಿದ್ದು, ತೆಲುಗು ನಟ ನಟಿಯರು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.ಜೊತೆಗೆ ಘಟನೆ ಸಂಬಂಧ ಪಾರ್ಟಿ ಆಯೋಜಕ ವಾಸು ಹಾಗೂ ಮೂವರು ಡ್ರಗ್ ಪೆಡ್ಲರ್ಸ್ (Drug Peddlers) ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಪೊಲೀಸರ ದಾಳಿ ವೇಳೆ 45 ಗ್ರಾಂ ಡ್ರಗ್ಸ್, MDMA, ಕೊಕೆನ್ ಸೇರಿ ಹಲವು ಬಗೆಯ ಮಾದಕ ವಸ್ತುಗಳು ಪತ್ತೆಯಾಗಿವೆ. ಈ ಪಾರ್ಟಿಯಲ್ಲಿ ಕೆಲವು ತೆಲುಗು ನಟಿಯರು, ಮಾಡೆಲ್‌ಗಳು ಕೂಡ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಇನ್ನು ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ 6 ಗಂಟೆಗಳಿಗೂ ಹೆಚ್ಚುಕಾಲದಿಂದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸೋಕೋ ಟೀಮ್ ಡ್ರಗ್ಸ್​​​​ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇವೆಂಟ್ ಮ್ಯಾನೇಜ್​ಮೆಂಟ್​​​​​ ಕಂಪನಿ ಹೊಂದಿರುವ ಹೈದರಾಬಾದ್​​ ಮೂಲದ ವಾಸು ಎಂಬುವವರು G.R.ಫಾರ್ಮ್​​​ಹೌಸ್​​ನಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. 78 ಜನರಿಗೆ ಬರ್ತಡೇ ಪಾರ್ಟಿಗೆ ಆಹ್ವಾನ ನೀಡಲಾಗಿತ್ತು. ಸದ್ಯ ಸಿಸಿಬಿ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಕೆಲ ಮಾದಕವಸ್ತುವನ್ನು ಟಾಯ್ಲೆಟ್​ನಲ್ಲಿ‌ ಬಿಸಾಕಿ ನೀರುಹಾಕಿ ನಾಶ ಮಾಡಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.

 

ಫಾರ್ಮ್​​​ಹೌಸ್​ಗೆ SP ಮಲ್ಲಿಕಾರ್ಜುನ ಬಾಲದಂಡಿ ಭೇಟಿ

ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಹೆಬ್ಬಗೋಡಿ ಪೊಲೀಸರಿಂದ ಮಾಹಿತಿ ಪಡೆಯುತ್ತಿದ್ದಾರೆ. FSL ಟೀಂ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಅಗತ್ಯ ಸಾಕ್ಷ್ಯ ಸಂಗ್ರಹಿಸಿ ತೆರಳಿದೆ.

ಅವಧಿ ಮೀರಿ ರೇವ್‌ ಪಾರ್ಟಿ ನಡೆಯುತ್ತಿರುವ ಬಗ್ಗೆ ಸೂಚನೆ ಸಿಕ್ಕಿದ್ದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲಿ ಮಾದಕ ವಸ್ತುಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ರೇವ್‌ ಪಾರ್ಟಿಯಲ್ಲಿ ಜನಪ್ರಿಯ ಡಿಜಿಎಗಳಾದ ರಾಬ್ಸ್‌, ಕಾಯ್ವಿ, ಬ್ಲಡಿ ಮಸ್ಕರಾ ಮುಂತಾದವರೂ ಭಾಗಿಯಾಗಿದ್ದರು ಎನ್ನಲಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ನಾರ್ಕೊಟಿಕ್ಸ್ ಸ್ನಿಫರ್ ಡಾಗ್ ಗಳಾದ ಭೂಮಿ, ರಾಣಾ , ರಾಮು ಮತ್ತು ಮೈಲು ಎಂಬ ಶ್ವಾನದಳದಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist