ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

Twitter
Facebook
LinkedIn
WhatsApp
Rain Report1583178931

ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ, ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 38.3 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 33.5 ಡಿಗ್ರಿ ಸೆಲ್ಸಿಯಸ್​ನಷ್ಟು ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೇ, ಇನ್ನೆರಡು ದಿನಗಳಲ್ಲಿ ಸಂಜೆ ಅಥವಾ ರಾತ್ರಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇದೇ 26 ಮತ್ತು 27ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ರಾಯಚೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತಿ ಮಳೆಯಾಗುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ