ಗುರುವಾರ, ಮೇ 9, 2024
Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆದರಿಕೆ ಕರೆ ಹಿನ್ನೆಲೆ ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳಿಗೂ ಹೆಚ್ಚಿನ ಭದ್ರತೆ

Twitter
Facebook
LinkedIn
WhatsApp
ಬೆದರಿಕೆ ಕರೆ ಹಿನ್ನೆಲೆ ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳಿಗೂ ಹೆಚ್ಚಿನ ಭದ್ರತೆ
 

ಬೆಂಗಳೂರು: ರಾಜ್ಯದ ಆರ್‌ಎಸ್‌ಎಸ್ ಕಚೇರಿಗಳ ಮೇಲೆ ದಾಳಿ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಎಲ್ಲಾ ಆರ್‌ಎಸ್‌ಎಸ್ ಕಚೇರಿಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಂಗಳವಾರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಗೃಹ ಸಚಿವ, ಆಯಾಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇರುವ ಆರ್‌ಎಸ್‌ಎಸ್ ಕಚೇರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಪೊಲೀಸ್ ವಿಭಾಗಕ್ಕೆ ತುರ್ತು ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

ಉತ್ತರ ಪ್ರದೇಶದ 2 ಹಾಗೂ ಕರ್ನಾಟಕದ 4 ಆರ್‌ಎಸ್‌ಎಸ್ ಕಚೇರಿಗಳನ್ನು ಧ್ವಂಸಗೊಳಿಸುವುದಾಗಿ ವಾಟ್ಸಪ್ ಸಂದೇಶವನ್ನು ತಮಿಳು ನಾಡಿನಿಂದ ವ್ಯಕ್ತಿಯೊಬ್ಬ ಉತ್ತರ ಪ್ರದೇಶದ ವ್ಯಕ್ತಿಗೆ ಕಳುಹಿಸಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ.

 

ವಾಟ್ಸಪ್ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಈಗಾಗಲೇ ಗುರುತಿಸಲಾಗಿದೆ. ಆರೋಪಿ ಸೆಂಥಿಲ್‌ನನ್ನು ತಮಿಳು ನಾಡಿನಲ್ಲಿ ಬಂಧಿಸಲಾಗಿದೆ. ಈ ರೀತಿಯಾಗಿ ಬೆದರಿಕೆ ಕರೆ ಅಥವಾ ಸಂದೇಶಗಳನ್ನು ಕಳುಹಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಭಯೋತ್ಪದನೆ ಚಟುವಟಿಕೆಗಳಲ್ಲಿ ತೊಡಗಿದ್ದ ಎನ್ನಲಾದ ಜಮ್ಮು ಕಾಶ್ಮೀರದ ನಿವಾಸಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ರಾಜ್ಯದ ಪೊಲೀಸರೂ ಈ ಕುರಿತು ತನಿಖೆ ಆರಂಭಿಸಿದ್ದಾರೆ ಎಂದಿದ್ದಾರೆ. ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಪೊಲೀಸರು ಜಮ್ಮು ಕಾಶ್ಮೀರ ರಾಜ್ಯದ ಪೋಲೀಸರ ಜತೆ ಸಮನ್ವಯ ಸಾಧಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಬಂಧಿಸಲಾದ ಶಂಕಿತ ಉಗ್ರನಿಗೆ ನೆಲೆಸಲು ಅವಕಾಶ ಮಾಡಿಕೊಟ್ಟಿದ್ದಲ್ಲದೆ ಮೊಬೈಲ್ ಫೋನ್ ಪಡೆಯಲು ಹಾಗೂ ಇತರ ದಾಖಲೆಗಳನ್ನು ಪಡೆಯಲು ಸ್ಥಳೀಯರೂ ಸಹಾಯ ಮಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಉಗ್ರನನ್ನು ಪತ್ತೆ ಹಚ್ಚಲು ರಾಜ್ಯದ ಪೊಲೀಸರು ಸಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ರಾಜ್ಯದ ಪೊಲೀಸರು ಜಮ್ಮು ಕಾಶ್ಮೀರದ ಪೊಲೀಸರೊಂದಿಗೆ ಸಂಪರ್ಕ ಹೊಂದಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ