ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮೈಸೂರು (ಅ.2) : ದೇಶದಲ್ಲಿಂದು ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಆದರೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಭಾರತ ಐಕ್ಯತಾ ಯಾತ್ರೆ ಅಂಗವಾಗಿ ನಂಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರದಲ್ಲಿ ಶನಿವಾರ ಸಂಜೆ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಯುಪಿಎ ಸರ್ಕಾರ ಇದ್ದಾಗ ಅನಿಲ ಸಿಲಿಂಡರ್ವೊಂದರ ಬೆಲೆ 400 ರು. ಇತ್ತು. ಈವತ್ತು 1,000 ರು. ದಾಟಿದೆ. ಹಾಗಾದರೆ, 600 ರು. ಎಲ್ಲಿ, ಯಾರ ಜೇಬಿಗೆ ಹೋಗುತ್ತಿದೆ? ಪೆಟ್ರೋಲ್, ಡಿಸೇಲ್ ದರ ಕೂಡ ಹೆಚ್ಚಾಗಿದೆ. ಈ ಹಣವೆಲ್ಲಾ ಯಾರಿಗೆ ಹೋಗ್ತಾ ಇದೆ ಎಂದು ಪ್ರಶ್ನಿಸುವಂತೆ ಜನರಿಗೆ ಕರೆ ನೀಡಿದರು.
ನಮ್ಮದು ದೇಶವನ್ನು ಜೋಡಿಸುವ ಯಾತ್ರೆ. ಕನ್ಯಾಕುಮಾರಿಯಿಂದ ಆರಂಭವಾಗಿ ಕಾಶ್ಮೀರದವರೆಗೆ ನದಿಯಂತೆ ಸಾಗುತ್ತಿರುವ ಈ ಯಾತ್ರೆಯಲ್ಲಿ ಎಲ್ಲಾ ಧರ್ಮ, ವರ್ಗ, ಜಾತಿ, ಭಾಷಿಕರು ಪಾಲ್ಗೊಳ್ಳುತ್ತಿದ್ದಾರೆ. ಇದೇ ನಿಜವಾದ ಹಿಂದೂಸ್ತಾನ. ಜನರ ಬಳಿ ಈ ಎಲ್ಲಾ ವಿಷಯಗಳನ್ನು ಪ್ರಸ್ತಾಪಿಸಲು, ಜನರನ್ನು ಒಗ್ಗೂಡಿಸಲು ಈ ಯಾತ್ರೆ ಶುರು ಮಾಡಿದ್ದೇವೆ. ಸಾಮಾನ್ಯ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯ ವಿರುದ್ಧ ಹೋರಾಡಲೆಂದೇ ಈ ಯಾತ್ರೆಯನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?