ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಲೆ ಕುಸಿತ: 4 ಕ್ವಿಂಟಲ್‌ ಈರುಳ್ಳಿ ಮಾರಿದ ರೈತನಿಗೆ ಸಿಕ್ಕಿದ್ದು ಕೇವಲ 8 ರು...!

Twitter
Facebook
LinkedIn
WhatsApp
ಬೆಲೆ ಕುಸಿತ: 4 ಕ್ವಿಂಟಲ್‌ ಈರುಳ್ಳಿ ಮಾರಿದ ರೈತನಿಗೆ ಸಿಕ್ಕಿದ್ದು ಕೇವಲ 8 ರು…!

ಗದಗ(ನ.29):  ಹೊಲ ಹರಗಿ, ಹದ ಮಾಡಿ, ಬೀಜ, ಗೊಬ್ಬರ ಹಾಕಿ ವರ್ಷ ಪೂರ್ತಿ ದುಡಿದು ಬೆಳೆದ ಈರುಳ್ಳಿಯನ್ನು ಮಾರುಕಟ್ಟೆಯಲ್ಲಿ ಉತ್ತಮ ಬೆಲೆಗೆ ಮಾರಬೇಕು ಎಂದ ರೈತ​ರಿಗೆ ದಿಢೀರ್‌ ಬೆಲೆ ಕುಸಿ​ತ​ದಿಂದ ಬರ​ಸಿ​ಡಿಲು ಬಡಿ​ದಂತಾ​ಗಿದೆ. 

ಗದಗ ತಾಲೂ​ಕಿನ ತಿಮ್ಮಾಪೂರ ಗ್ರಾಮದ ರೈತ ಪವಾಡೆಪ್ಪ ಹಳ್ಳಿಕೇರಿ ಎಂಬುವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ 4 ಕ್ವಿಂಟಲ್‌ ಈರುಳ್ಳಿಯನ್ನು ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ತಂದಿದ್ದರು. ಈರುಳ್ಳಿ ಬೆಲೆ ದಿಢೀರ್‌ ಕುಸಿತ ಕಂಡಿದ್ದು, 1 ಕ್ವಿಂಟಲ್‌ಗೆ 100 ರು.ನಂತೆ ಮಾರಾಟವಾಯಿತು. ಹೀಗಾಗಿ, 4 ಕ್ವಿಂಟಲ್‌ಗೆ (4 ಕ್ವಿಂಟಲ್‌ 10 ಕೆಜಿ) ಒಟ್ಟು 410 ರು.ಬಿಲ್‌ ಆಗಿದೆ. ಲಾರಿ ಬಾಡಿಗೆ 377 ರು., ಹಮಾಲಿ ಖರ್ಚು 24 ರು. ಇವೆಲ್ಲಾ ಕಳೆದು ಪವಾಡೆಪ್ಪ ಅವರಿಗೆ ದೊರೆತ ಹಣ ಕೇವಲ 8 ರೂಪಾಯಿ 36 ಪೈಸೆ. ಸರ್ಕಾರ ಮಧ್ಯ ಪ್ರವೇಶಿಸಿ ಈರುಳ್ಳಿಗೆ ಸೂಕ್ತ ಬೆಲೆ ನಿಗದಿ ಪಡಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ