ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳಗಾವಿಯಲ್ಲಿ ಯುವಕನ ಬರ್ಬರ ಹತ್ಯೆ

Twitter
Facebook
LinkedIn
WhatsApp
19803fdfa6c53d4bf6b9201c129 2

ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಸ್ಕ್ರೂಡ್ರೈವರ್‌ನಿಂದ (Screwdriver) ಯುವಕನ ಎದೆಗೆ ಚುಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದಲ್ಲಿರುವ ಮಚ್ಚೆ ಬಳಿ ಯಳ್ಳೂರ ರಸ್ತೆಯಲ್ಲಿ ನಡೆದಿದೆ.

ತಾಲೂಕಿನ ಮಜಗಾಂವ ಗ್ರಾಮದ ಪ್ರತೀಕ್ ಲೋಹಾರ್ (21) ಹತ್ಯೆಯಾದ ಯುವಕ. ಬೆಳಗಾವಿ (Belagavi) ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಹೋಗುವಾಗ ಹತ್ಯೆ ಮಾಡಲಾಗಿದೆ. ಪ್ರತೀಕ್ ಸ್ನೇಹಿತನ (Friend) ಜೊತೆಗೆ ಕೆಲವರು ಜಗಳ ಆಡುತ್ತಿದ್ದರು. ಈ ವೇಳೆ ಜಗಳ ಬಿಡಿಸಲು ಹೋಗಿದ್ದ ಪ್ರತೀಕ್‌ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. 

ಈ ಹಿಂದೆ ಹಲವು ಬಾರಿ ದುಷ್ಕರ್ಮಿಗಳು ಪ್ರತೀಕ್ ಜತೆಗೆ ಜಗಳವಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆತ‌‌ ಜಗಳ ಬಿಡಿಸಲು ಬರುತ್ತಿದ್ದಂತೆ ಪ್ರತೀಕ್‌ನನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಬೈಕ್‌ನಲ್ಲಿದ್ದ ಸ್ಕ್ರೂಡ್ರೈವರ್‌ನಿಂದ ಎದೆಗೆ ಚುಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ