ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿಯ ರಾಜಕೀಯ ನೋಟ- ವಿವಾದಗಳಿದ್ದರೂ ಅಭಿವೃದ್ಧಿಯಿಂದ ವರ್ಚಸ್ಸು ದಿನೇದಿನೇ ಹಿಗ್ಗಿಸಿ ಕೊಳ್ಳುತ್ತಿರುವ ಹರೀಶ್ ಪೂಂಜಾ ಎದುರು ಬಂಗೇರ ಮಾತ್ರ ಪ್ರಬಲ ಅಭ್ಯರ್ಥಿ?

Twitter
Facebook
LinkedIn
WhatsApp
ಬೆಳ್ತಂಗಡಿಯ ರಾಜಕೀಯ ನೋಟ- ವಿವಾದಗಳಿದ್ದರೂ ಅಭಿವೃದ್ಧಿಯಿಂದ ವರ್ಚಸ್ಸು ದಿನೇದಿನೇ ಹಿಗ್ಗಿಸಿ ಕೊಳ್ಳುತ್ತಿರುವ ಹರೀಶ್ ಪೂಂಜಾ ಎದುರು ಬಂಗೇರ ಮಾತ್ರ ಪ್ರಬಲ ಅಭ್ಯರ್ಥಿ?

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವಿಶಿಷ್ಟ ವಿಧಾನಸಭಾ ಕ್ಷೇತ್ರ. ಕರಾವಳಿಯ ಸಂಪೂರ್ಣ ಮಲೆನಾಡು ಕ್ಷೇತ್ರಗಳಲ್ಲಿ ಬೆಳ್ತಂಗಡಿ ಒಂದು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ನಾಲ್ಕು ಬಾರಿ ವಸಂತ ಬಂಗೇರ ಪ್ರತಿನಿಧಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಸ ಮುಖ ಹರೀಶ್ ಪೂಂಜಾ ವಸಂತ ಬಂಗೇರ ಅವರನ್ನು ಭರ್ಜರಿಯಾಗಿ ಸೋಲಿಸಿದ್ದರು. ಹೊಸ ಮುಖ ನಮಗೆ ಸರಿಸಾಟಿ ಅಭ್ಯರ್ಥಿಯಲ್ಲ ಎಂದು ಕಾಂಗ್ರೆಸ್ನವರು ಹೇಳಿಕೊಂಡು ತಿರುಗಾಡುವ ಮಧ್ಯೆ ಹರೀಶ್ ಪೂ೦ಜಾ ಬೃಹತ್ ಮತಗಳ ಅಂತರದಿಂದ ವಸಂತ ಬಂಗೇರ ಅವರನ್ನು ಸೋಲಿಸಿ ಬೀಗಿದ್ದರು.

ಹರೀಶ್ ಪೂಂಜಾ ಈ ಮೊದಲು ಮಂತ್ರಿಗಳ ಕೆಳಗಡೆ ಕೆಲಸ ಮಾಡಿದ ಅನುಭವ ಹೊಂದಿರುವ ಕಾರಣ ಸರ್ಕಾರದ ಮಟ್ಟದಲ್ಲಿ ಹೇಗೆ ಕೆಲಸವನ್ನು ತರಬೇಕು ಎಂಬ ಅನುಭವವನ್ನು ಹೊಂದಿದ್ದಾರೆ ಎನ್ನುತ್ತಾರೆ ಬೆಳ್ತಂಗಡಿಯ ಸಾರ್ವಜನಿಕರು.

ಈ ಮೊದಲು ಸಿದ್ದರಾಮಯ್ಯ ಸರಕಾರದಲ್ಲಿ ವಸಂತ ಬಂಗೇರ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಬೆಳ್ತಂಗಡಿ ಕ್ಷೇತ್ರಕ್ಕೆ ಮಾಡಿದ್ದರು. ಇದಕ್ಕೆ ಸರಿಸಾಟಿಯಾಗಿ ಹರೀಶ್ ಪೂಂಜಾ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ ಎಂಬುದು ಬಿಜೆಪಿಯವರ ಆತ್ಮ ವಿಶ್ವಾಸದ ಮಾತುಗಳು. ಇದನ್ನು ಅಲ್ಲಗಳೆಯುವ ಕಾಂಗ್ರೆಸಿಗರು ಪುಕ್ಕಟೆ ಪ್ರಚಾರ ಪಡೆಯುತ್ತಾರೆ ಎಂಬ ಆರೋಪ ಮಾಡುತ್ತಾರೆ. ಈ ನಡುವೆ ಅರಣ್ಯ ಅಧಿಕಾರಿ ವರ್ಗಾವಣೆಯ ವಿವಾದ ಹರೀಶ್ ಪೂಂಜಾ ಅವರನ್ನು ಮತ್ತೆ ಮತ್ತೆ ಕಾಡುತ್ತಿದೆ.

ಈ ಎಲ್ಲ ವಿವಾದಗಳು, ಆರೋಪಗಳು ಇದ್ದರು ಹರೀಶ್ ಪೂಂಜಾ ಬೆನ್ನುಹತ್ತಿ ಬೆಳ್ತಂಗಡಿಯಲ್ಲಿ ಅಭಿವೃದ್ಧಿಕಾರ್ಯಗಳನ್ನು ಮಾಡಿದ್ದಾರೆ ಎನ್ನುತ್ತಾರೆ ಸಾರ್ವಜನಿಕರು. ಈ ರೀತಿ ಅಭಿವೃದ್ಧಿ ಕಾರ್ಯಗಳಿಂದ ವರ್ಚಸ್ಸು ಹೆಚ್ಚು ಮಾಡುತ್ತಿರುವ ಹರೀಶ್ ಪೂಂಜಾ ಅವರಿಗೆ ವಸಂತ ಬಂಗೇರ ಅವರೇ ಸರಿಯಾದ ಅಭ್ಯರ್ಥಿ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಕಾಂಗ್ರೆಸ್ನಿಂದ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ ಗೌಡ ಪ್ರಬಲ ಆಕಾಂಕ್ಷಿ ಗಳಾಗಿದ್ದಾರೆ. ಆದರೆ ಪ್ರಸ್ತುತ ದಿನೇದಿನೇ ತನ್ನ ಜನಪ್ರಿಯತೆ ಹೆಚ್ಚು ಮಾಡುತ್ತಿರುವ ಹರೀಶ್ ಪೂಂಜಾ ಮುಂದೆ ವಸಂತ ಬಂಗೇರ ಅಭ್ಯರ್ಥಿಯಾದರೆ ಪೈಪೋಟಿ ನೀಡಬಹುದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ಮಾಡಿ ಚುನಾವಣೆ ನಡೆಸಬಹುದು ಎಂಬ ಅಭಿಪ್ರಾಯ ಸಾರ್ವಜನಿಕರದ್ದು. ಆದರೆ ಪಕ್ಷಗಳ ಒಳ ತೀರ್ಮಾನಗಳು, ಸಮೀಕರಣಗಳು ಯಾರ ಊಹೆಗೂ ನಿಲುಕದ್ದು.

ಈ ನಡುವೆ ವಸಂತ ಬಂಗೇರ ಬಹಳ ಕ್ರಿಯಾಶೀಲವಾಗಿ ಕ್ಷೇತ್ರದ ತುಂಬೆಲ್ಲಾ ಓಡಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ತಮ್ಮ ಆಪ್ತರ ಬಳಿ ಸ್ಪಷ್ಟವಾಗಿ ಹೇಳಿದ್ದಾರೆ. ಇದರಿಂದಾಗಿ ಅವರು ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನುತ್ತಾರೆ ಅವರ ಆಪ್ತ ಮೂಲಗಳು. ಒಟ್ಟಿನಲ್ಲಿ ಬೆಳ್ತಂಗಡಿ ಕಾಂಗ್ರೆಸ್ಸಿನ ಅಭ್ಯರ್ಥಿ ಮುನ್ನುಗ್ಗುತ್ತಿರುವ ಹರೀಶ್ ಪೂಂಜಾ ರನ್ನು ಕಟ್ಟಿಹಾಕಲು ಸಫಲರಾಗುತ್ತಾರೆಯೆ? ಎಂಬ ಕುತೂಹಲ ಜನರಲ್ಲಿ ಮನೆ ಮಾಡಿದೆ. ಆದರೆ ಬಿಜೆಪಿ ಕಾರ್ಯಕರ್ತರು ನಾವು ಉತ್ತಮ ಅಂತರದಿಂದ ವಿಜಯ ಆಗುತ್ತೇವೆ ಎಂಬ ಆತ್ಮವಿಶ್ವಾಸದ ನುಡಿಗಳನ್ನು ನುಡಿಯುತ್ತಾರೆ. ಏನೇ ಆದರೂ ಜನರ ತೀರ್ಮಾನ ಏನು ಎಂಬುದು ಚುನಾವಣಾ ಫಲಿತಾಂಶ ಬಂದಮೇಲೆ ತಿಳಿಯಬಹುದು, ಅಲ್ಲಿಯವರೆಗೆ ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist