ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ

Twitter
Facebook
LinkedIn
WhatsApp
17 1455684655 gasblast 12 1478931974 31 1490932675 2

ಬೆಳ್ತಂಗಡಿ, ಜ 30: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ (19 ವರ್ಷ) ಎಂದು ಗುರುತಿಸಲಾಗಿದೆ.

ಹರ್ಷಿತ್ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ ಚಾಟ್ ಮಾಡಿಕೊಂಡಿದ್ದ. ಆ ಬಳಿಕ ಅಪರಿಚಿತ ವ್ಯಕ್ತಿಯು ಮೊಬೈಲ್‌ ಗೆ ವಿಡಿಯೋ ಕಾಲ್‌ ಮಾಡಿ ಮಾತಾಡಿ, ಹರ್ಷಿತ್ ಬಳಿ ನಿಮ್ಮ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು, ಇದನ್ನು ಸಾರ್ವಜನಿಕವಾಗಿ ವೈರಲ್‌ ಮಾಡುತ್ತೇನೆ‌, ವೈರಲ್‌ ಮಾಡಬಾರದು ಎಂದಾದರೆ ತನಗೆ 11,000 ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದನು.

ಇದಕ್ಕೆ‌ ಹರ್ಷಿತ್ ಜ.23 ರವರೆಗೆ ಅವಕಾಶ ಕೊಡುವಂತೆ ಕೇಳಿದ್ದು, ಆದರೆ ಜ.24 ಮಧ್ಯಾಹ್ನದವರೆಗೂ ಹಣ ಹೊಂದಿಸಲು ಸಾಧ್ಯವಾಗದೇ ಇದ್ದುದ್ದರಿಂದ ಆಪಾದಿತನಿಗೆ ಹಣ ಕೊಡದ ಕಾರಣ ಆತನು ವೈಯಕ್ತಿಕ ವಿಡಿಯೋ ವೈರಲ್‌ ಮಾಡಿದರೆ ಮಾನ ಹೋಗಬಹುದೆಂಬ ಭಯದಿಂದ ಜ.24 ರಂದು ಮಧ್ಯಾಹ್ನದ ನಂತರ ಇಲಿ ಪಾಷಾಣವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥರಾದ ಹರ್ಷಿತ್ ಗೆ ಚಿಕಿತ್ಸೆಗಾಗಿ ಉಜಿರೆ ಬೆನಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಅಲ್ಲಿನ ವೈದ್ಯರು ಆತನನ್ನು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್‌ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ ಹಿನ್ನೆಲೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿನ ವೈದ್ಯರು ಪರೀಕ್ಷಿಸಿ ಒಳರೋಗಿಯನ್ನಾಗಿ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸಿದೆ ಜ.29 ರಂದು ಸಂಜೆ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ