ಬೆಳ್ತಂಗಡಿ: ಮೆಟ್ಟಿಲುಗಳ ಸಹಾಯವಿಲ್ಲದೆ 1,700 ಅಡಿ ಗಡಾಯಿ ಕಲ್ಲು ಏರಿ ದಾಖಲೆ ನಿರ್ಮಿಸಿದ ಜ್ಯೋತಿರಾಜ್
Twitter
Facebook
LinkedIn
WhatsApp
ಬೆಳ್ತಂಗಡಿ: ಫೆ. 12 : ದಿ ಮಂಕಿ ಮ್ಯಾನ್ ಖ್ಯಾತಿಯ ಜ್ಯೋತಿರಾಜ್ ಯಾನೆ ಕೋತಿ ರಾಜ್ ಎರಡೇ ತಾಸಿನಲ್ಲಿ ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಕೇವಲ ಕೈಗಳ ಸಹಾಯದಿಂದ ಬಂಡೆ ಏರಿ ದಾಖಲೆ ನಿರ್ಮಿಸಿದ್ದಾರೆ.
ಸಮುದ್ರ ಮಟ್ಟದಿಂದ 1,700 ಅಡಿಯಿರುವ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಮೆಟ್ಟಿಲುಗಳ ಸಹಾಯವಿಲ್ಲದೆ ಅನಾಯಾಸವಾಗಿ ಏರುವ ಮೂಲಕ ದಿ ಮಂಕಿ ಮ್ಯಾನ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ನಿನ್ನೆ ಬೆಳಗ್ಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ದೇವಸ್ಥಾನದ ಉತ್ತರ ಭಾಗದಿಂದ ಗಡಾಯಿಕಲ್ಲು ಏರುವ ಮುನ್ನ 9.50ಕ್ಕೆ ತೆಂಗಿನ ಕಾಯಿ ಒಡೆದು ಹತ್ತಲು ಆರಂಭಿಸಿದ್ದಾರೆ.
ಸುಮಾರು 11.50ರ ಸುಮಾರಿಗೆ ಗಡಾಯಿಕಲ್ಲು ತುತ್ತ ತುದಿ ಏರಿ ಕನ್ನಡ ನಾಡಿನ ಬಾವುಟವನ್ನು ಹಾರಿಸುವ ಮೂಲಕ ಕನ್ನಡಭಿಮಾನ ಮೆರೆದಿದ್ದಾರೆ.