ಡಿ.23 ರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನಿಂದ ಇವರು ಶಬರಿಮಲೆಗೆ ಯಾತ್ರೆ ಹೊರಟವರಾಗಿದ್ದು ವಾಹನದಲ್ಲಿ ಒಟ್ಟು 21 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ.
ಅಪಘಾತ ನಡೆದ ಜಾಗ ಇಳಿಜಾರಾಗಿದ್ದು, ವಾಹನದ ಬ್ರೇಕ್ ಕೈ ಕೊಟ್ಟಿದೆ ಎಂದು ತಿಳಿದೊಡನೆಯೇ ಅದರ ಚಾಲಕ ಸಮಯಪ್ರಜ್ಞೆ ಮೆರೆದಿದ್ದು ವಾಹನವನ್ನು ರಸ್ತೆ ಪಕ್ಕದ ಪೊದೆಯ ಕಡೆಗೆ ಚಲಿಸುವಂತೆ ಮಾಡಿ ನಿಯಂತ್ರಣಕ್ಕೆ ತಂದಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಒಂದು ಕಡೆ ಆಳ ಕಂದಕ, ಇನ್ನೊಂದೆಡೆ ವಿದ್ಯುತ್ ಕಂಬ ಇದ್ದು ಸ್ವಲ್ಪ ಎಚ್ಚರ ತಪ್ಪಿದ್ದರೂ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.
ಅಪಘಾತ ನಡೆದ ವಿವರ ಅರಿತ ಮುಂಡಾಜೆ ಗ್ರಾಪಂ ಸದಸ್ಯರಾದ ಗಣೇಶ ಬಂಗೇರ, ಜಗದೀಶ್ ನಾಯ್ಕ ಹಾಗೂ ಸಮಾಜಸೇವಕ ಸಚಿನ್ ಭಿಡೆ ಅವರುಗಳು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಇತರರೊಂದಿಗೆ ನೆರವಾದರು.
ಆರು ಆಂಬುಲೆನ್ಸ್ಗಳು ಅಗಮಿಸಿ, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಹಾಗೂ ಸ್ಥಳೀಯರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist