ಶುಕ್ರವಾರ, ಜುಲೈ 5, 2024
ದರ್ಶನ್​ ಬಂಧನದ ಬಳಿಕ ಮೊದಲ ಬಾರಿ ಮೌನ ಮುರಿದ ಸುಮಲತಾ ಅಂಬರೀಷ್​!-ಬಿಹಾರದಲ್ಲಿ 15 ದಿನಗಳಲ್ಲಿ 10 ಸೇತುವೆ ಕುಸಿತ!-ನಟ ದರ್ಶನ್ ಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!-ಶಾಸಕ ಡಾ. ಮಂತರ್ ಗೌಡ ಸೂಚನೆ.ಕೊಡಗಿನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರವಾಸಿ ಮಾರ್ಗದರ್ಶಕ ಹುದ್ದೆಗೆ ನೇಮಕ ಕುರಿತಂತೆ ಪ್ರಕಟಣೆ ಹೊರಡಿಸಿದ ಪ್ರವಾಸೋದ್ಯಮ ಇಲಾಖೆ.-ಕನ್ನಡದಲ್ಲಿ ಹವಾ‌ ಎಬ್ಬಿಸಿದೆ ಸಾಂಕೇತ್ ಚಿತ್ರದ ಟೀಸರ್. ಸೂಪರ್ ಅಂದ್ರು ವೀಕ್ಷಕರು!-ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅಸಮಾಧಾನ ಹೊರಹಾಕಿದ ಹೈಕೋರ್ಟ್

Twitter
Facebook
LinkedIn
WhatsApp
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅಸಮಾಧಾನ ಹೊರಹಾಕಿದ ಹೈಕೋರ್ಟ್

ಬೆಂಗಳೂರು: ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜ್ಯ ಹೈಕೋರ್ಟ್ ತೀವ್ರ ತೆಗೆದುಕೊಂಡಿದೆ.

ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ದಾಖಲಾದ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದೆ.

ಜನ ಪ್ರತಿನಿಧಿಯಾದ ವ್ಯಕ್ತಿ ಯಾವನೋ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಕ್ಕೆ ಪೊಲೀಸ್ ಠಾಣೆಗೆ ಹೋಗುವುದು ಎಷ್ಟು ಸರಿ. ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ಅವರನ್ನು ಪೊಲೀಸರು ಬಂದಿಸಿದ್ದಾರೆ ಎಂದರೆ ತಕ್ಷಣ ಜನ ಪ್ರತಿನಿಧಿ ಪೊಲೀಸ್ ಠಾಣೆಗೆ ಹೋಗಲು ಸಾಧ್ಯವೇ, ಅರ್ಜಿದಾರರು ನೀವು ಠಾಣೆಗೆ ಹೋಗಬಾರದಾಗಿತ್ತು ಎಂದು ತಿಳಿಸಿತು,

ಯಾವುದೇ ವ್ಯಕ್ತಿಯನ್ನು ಬಂಧಿಸಿದಲ್ಲಿ ಅದನ್ನು ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಅದಕ್ಕೆ ಬದಲಾಗಿ ಶಾಸಕರಾದವರು ಠಾಣೆಗೆ ಹೋದರೆ ಪೊಲೀಸರು ತಮ್ಮ ಸೇವೆ ಸಲ್ಲಿಸುವುದಾದರೂ ಹೇಗೆ? ಎಂದು ಪೀಠ ಖಾರವಾಗಿ ಪ್ರಶ್ನಿಸಿತು.

ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿತರ ಪರವಾಗಿ ಆದೇಶಿಸಿರುವ ಭಾರತದ ಯಾವುದೇ ನ್ಯಾಯಾಲಯದ, ವಿದೇಶ ನ್ಯಾಯಾಲಯಗಳು ಒಂದೇ ಒಂದು ಆದೇಶ ನೀಡಿರುವ ಉದಾಹರಣೆ ಇದಿಯೇ? ಇದ್ದರೆ ಸಲ್ಲಿಸಿ ಅಧರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ಪೀಠ ತಿಳಿಸಿತು.

ವಾದ ಆಲಿಸಿದ ಪೀಠ, ಸರಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೆ, ಮುಂದಿನ ವಿಚಾರಣೆಯವರೆಗೆ ಸಾವಧಾನದಿಂದ ಇರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವುದು ಎಷ್ಟು ಸರಿ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.

ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಮಾಡುವುದಕ್ಕೆ ಬಿಡಿ ಎಂದು ಪೀಠ ಸಲಹೆ ನೀಡಿತು.

ಪ್ರಸಕ್ತ ದಿನಗಳಲ್ಲಿ ಪೊಲೀಸ್ರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೆವೆ ಸಲ್ಲಿಸುವುದಾದರೂ ಹೇಗೆ ಎಂದು ಪೀಠ ಇದೇ ವೆಳೆ ಪ್ರಶ್ನೆ ಮಾಡಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ