ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಳಂಬೆಳಗ್ಗೆ ಖಾಕಿ ಕಾರ್ಯಾಚರಣೆ – 86 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ

Twitter
Facebook
LinkedIn
WhatsApp
ಬೆಳ್ಳಂಬೆಳಗ್ಗೆ ಖಾಕಿ ಕಾರ್ಯಾಚರಣೆ – 86 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಖಾಕಿ ಪಡೆ 86 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ್ದು, 30 ರೌಡಿ ಶೀಟರ್‌ಗಳನ್ನ ಸಿಸಿಬಿ (CCB Police) ಕಚೇರಿಗೆ ಕರೆತಂದಿದ್ದಾರೆ.

ಐವರು ಎಸಿಪಿ (ACP), 30 ಇನ್ಸ್ಪೆಕ್ಟರ್‌ಗಳ ನೇತೃತ್ವದ ತಂಡ ದಾಳಿ ನಡೆಸಿದೆ. ನಂತರ ಸಿಸಿಬಿ ಕಚೇರಿಗೆ ಕರೆತಂದು ಸಿಸಿಬಿ ಎಸಿಪಿ ಧರ್ಮೆಂದ್ರ ನೇತೃತ್ವದಲ್ಲಿ ಫುಲ್ ಕ್ಲಾಸ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದೂ ವಾರ್ನಿಂಗ್ ನೀಡಲಾಗಿದೆ

ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ ಸೇರಿ ಕುಖ್ಯಾತ ರೌಡಿ ಶೀಟರ್‌ಗಳ ಮನೆ ಮೇಲೆ ದಾಳಿ ನಡೆದಿದೆ. ಈ ವೇಳೆ 30 ರೌಡಿಗಳನ್ನ ವಶಕ್ಕೆ ಪಡೆದಿದ್ದು, ದಾಳಿ ವೇಳೆ ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಹಲವರು ಮನೆಯಿಂದ ಎಸ್ಕೇಪ್ ಆಗಿರುವುದು ಕಂಡುಬಂದಿದೆ.

ದಾಳಿ ವೇಳೆ ವಿಲ್ಸನ್‌ಗಾರ್ಡನ್ (Wilson Garden) ನಾಗ ತಮಿಳುನಾಡಿನಲ್ಲಿ ಇರುವುದು ಬೆಳಕಿಗೆ ಬಂದಿದ್ದು, ಕೋತಿರಾಮ, ಆರ್.ಟಿ ನಗರ ವೆಂಕಟೇಶ, ಟಾಮಿ ಸೇರಿ 30 ಮಂದಿ ಸಿಕ್ಕಿಬಿದ್ದಿದ್ದಾರೆ. ವಿಜಯನಗರದ ರೌಡಿಶೀಟರ್ ರಾಘವೇಂದ್ರ ಪ್ರಸಾದ್ ಮನೆಯಲ್ಲಿ ಎರಡು ಲಾಂಗ್‌ಗಳು ಪತ್ತೆಯಾಗಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ