ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ಳಾರೆ:ಜ್ಯೂಸ್ ಬಾಟಲಿಯಿಂದ ಯುವಕನಿಗೆ ಮಾರಣಾಂತಿಕ ಹಲ್ಲೆ :8 ಮಂದಿಯನ್ನು ಬಂಧಿಸಿದ ಪೊಲೀಸರು

Twitter
Facebook
LinkedIn
WhatsApp

ಬೆಳ್ಳಾರೆ: ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಮಂದಿಯನ್ನು ಬೆಳ್ಳಾರೆ ಠಾಣೆಯ ಪೊಲೀಸರು ಜು. 20ರಂದು ವಶಕ್ಕೆ ಪಡೆದಿದ್ದಾರೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರಿನ ಮಸೂದ್ ಬಿ. (18) ಗಂಭೀರ ಗಾಯಗೊಂಡಿರುವವರು.ಮಸೂದ್ ತಿಂಗಳ ಹಿಂದೆ ಸುಳ್ಯದ ಕಳಂಜಕ್ಕೆ ಬಂದು ಸ್ಥಳೀಯವಾಗಿ ಕೂಲಿ ಕೆಲಸ ಮಾಡುತ್ತಿದ್ದರು. ಜು. 19ರ ಸಂಜೆ ಸುಧೀರ ಎಂಬಾತನಿಗೆ ಮಸೂದ್ ಅಂಗಡಿ ಬಳಿ ತಾಗಿದ ವಿಚಾರದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದರು. ಮಸೂದ್ ಸುಧೀರನಿಗೆ ಬಾಟಲಿ ತೋರಿಸಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಅಭಿಲಾಷ್, ಸುನಿಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಈ ವಿಚಾರವನ್ನು ಪೆಲತ್ತಡ್ಕದ ಇಬ್ರಾಹಿಂ ಶಾನೀಫ್ಗೆ ತಿಳಿಸಿ, ವಿಚಾರವನ್ನು ಮಾತನಾಡಿ ಇತ್ಯರ್ಥಗೊಳಿಸುವ, ಮಸೂದ್ನನ್ನು ಜತೆಗೆ ಕರೆ ತನ್ನಿ ಎಂದಿದ್ದರು. ಅದರಂತೆ ಅವರು ಸೂಚಿಸಿದ ಸ್ಥಳಕ್ಕೆ ಮಸೂದ್ನನ್ನು ರಾತ್ರಿ 11 ಗಂಟೆಗೆ ಕರೆದುಕೊಂಡು ಬಂದಿದ್ದ ವೇಳೆ ಹಲ್ಲೆ ಮಾಡಿದ್ದಾರೆ.

ಅಭಿಲಾಷ್ ಎಂಬಾತ ಸ್ಥಳದಲ್ಲಿದ್ದ ಖಾಲಿ ಜ್ಯೂಸ್ ಬಾಟಲಿಯಿಂದ ಮಸೂದನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಈ ವೇಳೆ ಮಸೂದ್ ಅಲ್ಲಿಂದ ಓಡಿ ಹೋಗಿದ್ದು, ಬಳಿಕ ಹುಡುಕಾಟ ನಡೆಸಿದ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದನು. ಗಾಯಾಳುವನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಅನಂತರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮಸೂದನನ್ನು ಕರೆಸಿ ಕೊಲೆ ಮಾಡುವ ಉದ್ದೇಶದಿಂದ ಕರೆಸಿ ಹಲ್ಲೆ ಮಾಡಿದ್ದಾರೆಂದು ಇಬ್ರಾಹಿಂ ಶಾನೀಫ್ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ