ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಸ್ಕಾಂ ಗ್ರಾಹಕರಿಗೆ ವಾಟ್ಸ್ ಆ್ಯಪ್ ಸಹಾಯವಾಣಿ : ಸುನಿಲ್ ಕುಮಾರ್

Twitter
Facebook
LinkedIn
WhatsApp
ಬೆಸ್ಕಾಂ ಗ್ರಾಹಕರಿಗೆ ವಾಟ್ಸ್ ಆ್ಯಪ್ ಸಹಾಯವಾಣಿ : ಸುನಿಲ್ ಕುಮಾರ್

ಬೆಂಗಳೂರು: ವಿದ್ಯುತ್ ವ್ಯತ್ಯಯ ಹಾಗು ವಿದ್ಯುತ್ ಸಂಬಂಧಿತ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರ ವಾಗಿ ಬಗೆಹರಿಸಲು ಬೆಸ್ಕಾಂನ 8 ಜಿಲ್ಲೆಗಳ 11 ‘ವಾಟ್ಸ್ ಆ್ಯಪ್ ಸಹಾಯವಾಣಿ’ ಸಂಖ್ಯೆಗಳನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಮಂಗಳವಾರ ಬಿಡುಗಡೆ ಮಾಡಿದರು.

ಮಳೆಗಾಲ ಹಾಗು ತುರ್ತು ಸಂದರ್ಭಗಳಲ್ಲಿ ಬೆಸ್ಕಾಂ ನ ಹಾಲಿ ಸಹಾಯವಾಣಿ ಸಂಖ್ಯೆ 1912 ಗೆ ಸಾವಿರಾರು ಕರೆಗಳು ಬರುತ್ತಿದ್ದು, ನಿರಂತರ ಕಾರ್ಯನಿರ್ವಹಣೆಯಲ್ಲಿರುತ್ತದೆ. ಈ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಹಾಯವಾಣಿ ಕರೆ ಲಭ್ಯ ವಾಗದೆಯಿರುವ ಹಿನ್ನೆಲೆಯಲ್ಲಿ ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಪ್ರತಿ ಜಿಲ್ಲೆಗೆ ಒಂದರಂತೆ ನೀಡಲು ಸಚಿವರು ಬೆಸ್ಕಾಂ ಗೆ ಸೂಚಿಸಿದ್ದರು.

8 ಜಿಲ್ಲೆಗಳಿಗೆ 11 ವಾಟ್ಸ್ ಆ್ಯಪ್ ಸಹಾಯವಾಣಿ ಬಿಡುಗಡೆ ಮಾಡಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಮೆಸ್ಕಾಂ, ಹೆಸ್ಕಾಂ, ಜಿಸ್ಕಾಂ ಮತ್ತು ಚೆಸ್ಕಾಂ ವ್ಯಾಪ್ತಿಯಲ್ಲಿ ವಾಟ್ಸ್ ಪ್ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.ಮಳೆಗಾಲ ಹಾಗು ತುರ್ತು ಸಂದರ್ಭಗಳಲ್ಲಿ ಹಾಲಿ ಸಹಾಯವಾಣಿ ಸಂಖ್ಯೆ 1912ಗೆ ಅತೀ ಹೆಚ್ಚು ಕರೆಗಳು ಬರುತ್ತಿರುವುದರಿಂದ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಪರಿಹಾರ ವಿಳಂಬ ವಾಗುತ್ತಿದ್ದು, ವಾಟ್ಸ್ ಆ್ಯಪ್ ಸಹಾಯವಾಣಿ ಬಿಡುಗಡೆಯಿಂದ ಗ್ರಾಹಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯುವುದು ಎಂದು ಸಚಿವರು ತಿಳಿಸಿದರು.

ಜತೆಗೆ 1912 ಗೆ ಬರುವ ಕರೆಗಳ ಒತ್ತಡ ಕೂಡ ವಾಟ್ಸ್ ಆ್ಯಪ್ ಸಹಾಯವಾಣಿ ಯಿಂದ ಕಡಿಮೆ ಆಗುತ್ತದೆ. ಗ್ರಾಹಕರು ವಾಟ್ಸ್ ಆ್ಯಪ್ ಸಂಧೇಶ ಕಳುಹಿಸುವ ಮೂಲಕ ಎಲ್ಲ ರೀತಿಯ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು ಎಂದು ಸಚಿವರು ಮಾಹಿತಿ ನೀಡಿದರು.


ಒಟ್ಟು 11 ವಾಟ್ಸ್ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಬೆಸ್ಕಾಂ ಒದಗಿಸಿದ್ದು, ಬೆಸ್ಕಾಂನ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ, ಉತ್ತರ, ಪೂರ್ವ ಹಾಗು ಪಶ್ಚಿಮ ವೃತ್ತಗಳಿಗೆ 4 ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗು ಕೋಲಾರ ಜಿಲ್ಲೆಯ ಬೆಸ್ಕಾಂ ವೃತ್ತಗಳಿಗೆ ತಲಾ ಒಂದು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ಒದಗಿಸಲಾಗಿದೆ.

ವಾಟ್ಸ್ ಆ್ಯಪ್ ಸಹಾಯವಾಣಿ ವಿವರ

ಬೆಂಗಳೂರು ನಗರ ಜಿಲ್ಲೆ :
ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014.
ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ: 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದುರ್ಗ ಜಿಲ್ಲೆ : 8277884020, ದಾವಣಗರೆ ಜಿಲ್ಲೆ: 8277884021.
ವಿದ್ಯುತ್ ವ್ಯತ್ಯಯದ ಕುರಿತು ಗ್ರಾಹಕರು ವಾಟ್ಸ್ ಆ್ಯಪ್ ಸಂದೇಶಗಳನ್ನು ಕಳುಹಿಸಿದ ಕೂಡಲೇ ಸಹಾಯವಾಣಿ ಕೇಂದ್ರದ ಗ್ರಾಹಕ ಸೇವಾ ಪ್ರತಿನಿಧಿಗಳು ದೂರುಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗಗಳಿಗೆ ರವಾನಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ.


ಸಹಾಯವಾಣಿಗೆ ನೋಡಲ್ ಅಧಿಕಾರಿಗಳ ನಿಯೋಜನೆ: ಇತ್ತೀಚೆಗೆ ಸುರಿದ ಭಾರೀ ಗಾಳಿ- ಮಳೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ, ಬೆಸ್ಕಾಂ 1912 ಸಹಾಯವಾಣಿ ಕೇಂದ್ರವನ್ನು ಇನ್ನಷ್ಟು ಬಲಪಡಿಸಲು ನಿರ್ಧರಿಸಲಾಗಿದ್ದು, ಸಹಾಯವಾಣಿ ಕೇಂದ್ರದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಲಾಗಿದೆ.


ಸಹಾಯಕ ಕಾರ್ಯನಿರ್ವಾಹಕ ಇಂಜಿನಿರ್ ಗಳನ್ನು ಮೂರು ಪಾಳಿಗಳಲ್ಲಿ ಸಹಾಯವಾಣಿ ಕೇಂದ್ರದಲ್ಲಿ ನಿಯೋಜಿಸಲಾಗಿದೆ. ಇದರಿಂದ ಸಹಾಯವಾಣಿ ಮತ್ತು ಬೆಸ್ಕಾಂ ವಿಭಾಗ ಹಾಗು ಉಪ ವಿಭಾಗಳ ನಡುವೆ ಸಮನ್ವಯ ಸಾಧಿಸಲು ಅನುಕೂಲವಾಗುತ್ತದೆ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಮಳೆಗಾಲ ಮತ್ತು ತುರ್ತು ಸಂದರ್ಭಗಳಲ್ಲಿ ನೋಡಲ್ ಅಧಿಕಾರಿಗಳು ಸಹಾಯವಾಣಿ ಕೇಂದ್ರಕ್ಕೆ ಬರುವ ದೂರುಗಳನ್ನು ಸಂಬಂಧಿಸಿದ ಬೆಸ್ಕಾಂ ಉಪ ವಿಭಾಗ ಕೇಂದ್ರಗಳಿಗೆ ಶೀಘ್ರದಲ್ಲಿ ಕಳುಹಿಸಿ ಪರಿಹಾರ ಸೂಚಿಸಲಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ