ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೈಂದೂರು : ಸಮುದ್ರದಲ್ಲಿ ದೋಣಿ ಅವಘಡ ; ಇಬ್ಬರು ಮೀನುಗಾರರ ಮೃತದೇಹ ಪತ್ತೆ!

Twitter
Facebook
LinkedIn
WhatsApp
ಬೈಂದೂರು : ಸಮುದ್ರದಲ್ಲಿ ದೋಣಿ ಅವಘಡ ; ಇಬ್ಬರು ಮೀನುಗಾರರ ಮೃತದೇಹ ಪತ್ತೆ!

ಉಡುಪಿ : ಉಡುಪಿ ಜಿಲ್ಲೆಯ ಶಿರೂರು ಅಳ್ವೆಗದ್ದೆ ಎಂಬಲ್ಲಿ ಭಾನುವಾರ ಸಂಜೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ಸಮುದ್ರಪಾಲಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಸೋಮವಾರ ಪತ್ತೆಯಾಗಿದೆ.

ದೋಣಿ ಮಗುಚಿ ಬಿದ್ದ 300 ಮೀಟರ್ ವ್ಯಾಪ್ತಿಯಲ್ಲಿ ಗಂಗೊಳ್ಳಿ ಮುಸ್ತಾಫಾ ಅವರ ಮಗ ಮುಹಮ್ಮದ್ ಮುಸಾಬ್(22) ಅವರ ಮೃತದೇಹವು ಸೋಮವಾರ ನಸುಕಿನ ವೇಳೆ 1.30ಕ್ಕೆ ಮತ್ತು ಬಾವು ನೂರುಲ್ ಅಮೀನ್ ಅವರ ಮಗ ನಝಾನ್ (24) ಅವರ ಮೃತದೇಹವು ನಸುಕಿನ ವೇಳೆ 2.45ರ ಸುಮಾರಿಗೆ ದೊರೆತಿದೆ.

ಇವರು ಅಲ್ಜಿ ಮುಹಮ್ಮದ್ ಯಾಸೀನ್, ಸಾರಾಂಗ್ ಮುಸ್ತಾಕ್ ಎಂಬವ ರೊಂದಿಗೆ ಕೈರಂಪಣಿ ಬಲೆಯನ್ನು ಹಾಕಿ ಮೀನುಗಾರಿಕೆ ಮಾಡಲು ಶಿರೂರು ಗ್ರಾಮದ ಅಳಿವೆಗದ್ದೆ ಕಿರು ಬಂದರಿಗೆ ತೆರಳಿದ್ದು, ಅಲ್ಲಿ ಮುಸಾಬ್ ಹಾಗೂ ನಝಾನ್, ಕುರ್ಡಿ ಸಾಧಿಕ್ ಎಂಬವರ ಸೈಫಾ ಎಂಬ ದೋಣಿಯಲ್ಲಿ ಬಲೆಯನ್ನು ಬಿಡುತ್ತಾ ತೀರದಿಂದ ಸುಮಾರು 100 ಮೀಟರ್ ದೂರ ಹೋಗಿದ್ದರು.

ಬಲೆಯನ್ನು ಬಿಡುತ್ತಿರುವಾಗ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿತ್ತೆನ್ನಲಾಗಿದೆ.ಇದರಿಂದ ದೋಣಿಯಲ್ಲಿದ್ದ ಇವರಿಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆ ಯಾದರು.ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸ್ಥಳಕ್ಕೆ ಬೈಂದೂರು ಎಸ್ಸೈ ನಿರಂಜನ ಗೌಡ, ಅಗ್ನಿಶಾಮಕದಳ, ಕರಾವಳಿ ಕಾವಲು ಪೊಲೀಸರು, ತಹಶೀಲ್ದಾರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಹುಡುಕಾಟದ ಬಳಿಕ ಮೃತದೇಹವು ನಸುಕಿನ ವೇಳೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.ಮುಸಾಬ್ ಕಳೆದ ವಾರ ಭಟ್ಕಳದ ಅಂಜುಮಾನ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದ್ದರು. ನಝಾನ್ 15 ದಿನಗಳ ಹಿಂದೆ ದುಬೈಯಿಂದ ಊರಿಗೆ ರಜೆಯಲ್ಲಿ ಬಂದಿದ್ದರು ಎಂದು ತಿಳಿದು ಬಂದಿದೆ.ಮುಸಾಬ್ ತಂದೆ ತಾಯಿ, ಮೂವರು ಸಹೋದರರಿಯರು, ಇಬ್ಬರು ಸಹೋದರರನ್ನು ಮತ್ತು ನಝಾನ್ ತಂದೆ ತಾಯಿ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ