ಬೈಕ್ ಅಪಘಾತ, ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
Twitter
Facebook
LinkedIn
WhatsApp
ಸುಳ್ಯ ಸಮೀಪದ ಕಲ್ಚರ್ಪೆ – ಪಾಲಡ್ಕ ಬಳಿ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ, ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಪಿಕಪ್ ವಾಹನವೊಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ನಿಯಂತ್ರಣ ತಪ್ಪಿದ ಬೈಕ್ ಕಾರೊಂದಕ್ಕೆ ಗುದ್ದಿದ ಪರಿಣಾಮವಾಗಿ ಕೆವಿಜಿ ಆಯುರ್ವೇದ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿ ಚಿಕ್ಕಬಳ್ಳಾಪುರ ಮೂಲದ ಸ್ವರೂಪ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.