ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೈಕ್-ಕಾರಿನ ನಡುವೆ ಅಪಘಾತ: ದಂಪತಿ ಬಲಿ; ಹೊತ್ತಿ ಉರಿದ ವಾಹನಗಳು

Twitter
Facebook
LinkedIn
WhatsApp
ಬೈಕ್-ಕಾರಿನ ನಡುವೆ ಅಪಘಾತ: ದಂಪತಿ ಬಲಿ; ಹೊತ್ತಿ ಉರಿದ ವಾಹನಗಳು

ಗದಗ: ನರಗುಂದ ತಾಲೂಕಿನ ಭೈರನಹಟ್ಟಿ ಬಳಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ದಂಪತಿಗಳಿಬ್ಬರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಹಾಗೂ ಬೈಕ್ ಎರಡೂ ಸುಟ್ಟು ಭಸ್ಮವಾಗಿವೆ.

ಹುಬ್ಬಳ್ಳಿ ಮೂಲದ ಬೈಕ್ ಸವಾರ 45 ವರ್ಷದ ಸಹದೇವಪ್ಪ ದೇವರಮನಿ ಹಾಗೂ 36 ವರ್ಷದ ದೀಪಾ ದೇವರಮನೆ‌ ಮೃತ ದಂಪತಿಗಳು. ಇಬ್ಬರ ಮದುವೆಯಾಗಿ 15 ವರ್ಷವಾದರೂ ಮಕ್ಕಳಾಗಿರಲಿಲ್ಲ. ಮಕ್ಕಳ ಹರಕೆಗಾಗಿ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇವರಿಗೆ ಪ್ರತಿ ಅಮವಾಸ್ಯೆಗೆ ಹೋಗುತ್ತಿದ್ದರು. ಇನ್ನು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಕಾರು ಸರ್ವಿಸ್ ಗಾಗಿ ಹುಬ್ಬಳ್ಳಿ ಗೆ ಹೊರಟಿತ್ತು. ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಕಾರಿ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಢಿಕ್ಕಿ ರಭಸಕ್ಕೆ ಸ್ಪೋಟಗೊಂಡು ಉರಿದ ವಾಹನಗಳ ಬೆಂಕಿಯನ್ನುಅಗ್ನಿಶಾಮಕ ದಳದ ಸಿಬ್ಬಂದಿಗಳು ನಂದಿಸಲು ಯತ್ನಿಸಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ