ಶನಿವಾರ, ಮೇ 18, 2024
ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ- ನರಳಾಡಿ ಪ್ರಾಣಬಿಟ್ಟ ಸವಾರ

Twitter
Facebook
LinkedIn
WhatsApp
ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ- ನರಳಾಡಿ ಪ್ರಾಣಬಿಟ್ಟ ಸವಾರ

ಹಾಸನ: ಜಿಲ್ಲೆಯಲ್ಲಿ ಭಾರೀ ಗಾಳಿ, ಮಳೆಯಿಂದಾಗಿ ಬೈಕ್ ಸವಾರನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದು, ನರಳಾಡಿ ಪ್ರಾಣ ಬಿಟ್ಟ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಕಲ್ಲೇಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (40) ಮೃತ ದುರ್ದೈವಿ. ಚನ್ನರಾಯಪಟ್ಟಣದಿಂದ ಬೈಕ್‍ನಲ್ಲಿ ಕಲ್ಲೇಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬೃಹತ್ ಗಾತ್ರದ ಮರವೊಂದು ರಂಗಶೆಟ್ಟಿ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧಗಂಟೆಗೂ ಹೆಚ್ಚು ಹೊತ್ತು ನರಳಾಡಿ ರಕ್ಷಿಸುವಂತೆ ಅಂಗಲಾಚಿದ್ದಾರೆ.

ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿದ್ದು, ರಂಗಶೆಟ್ಟಿಯನ್ನು ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದ್ದಾದರೂ ಜೀವಂತವಾಗಿ ಉಳಿಸಲು ಸಾಧ್ಯವಾಗಲಿಲ್ಲ. ರಂಗಶೆಟ್ಟಿ ನರಳಾಡುತ್ತಿದ್ದ, ದೃಶ್ಯ ಕಂಡು ಸ್ಥಳದಲ್ಲಿದ್ದವರು ಮರುಗಿದರು.

 

ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ 2 ಜೆಸಿಬಿ, ಹಿಟಾಚಿ ಯಂತ್ರ ಬಳಸಿ ರಂಗಶೆಟ್ಟಿ ಮೃತದೇಹವನ್ನು ಹೊರತೆಗೆದರು. ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮರದ ಕೆಳಗೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಲು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಕೆಲಕಾಲ ರಸ್ತೆ ತಡೆದು, ರಸ್ತೆಯಿಂದ ಮರ ತೆರವುಗೊಳಿಸಲು ಬಿಡದೆ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹಳೆಯದಾದ ಮರವನ್ನು ತೆರವುಗೊಳಿಸುವಂತೆ ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆಗೆ ಗ್ರಾಪಂ ವತಿಯಿಂದ ಮನವಿ ಸಲ್ಲಿಸಿದ್ದರೂ, ಇದುವರೆಗೂ ತೆರವುಗೊಳಿಸಿಲ್ಲ. ಪ್ರತಿನಿತ್ಯ ಬಸ್ ಸೇರಿದಂತೆ ಇತರೆ ವಾಹನಗಳನ್ನು ಹತ್ತಲು ಇದೇ ಮರದ ಕೆಳಗೆ ವಿದ್ಯಾರ್ಥಿಗಳು ಸೇರಿ ನೂರಾರು ಮಂದಿ ನಿಲ್ಲುತ್ತಾರೆ.

ಇಂದು ಭಾನುವಾರವಾಗಿದ್ದರಿಂದ ಮಕ್ಕಳು ಶಾಲಾ-ಕಾಲೇಜಿಗೆ ಹೋಗಿಲ್ಲ. ಈ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರು ಆಗಮಿಸುವಂತೆ ಗ್ರಾಮಸ್ಥರು ಪಟ್ಟುಹಿಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ