ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೊಮ್ಮಾಯಿ ಸಂಪುಟದಿಂದ ಕರ್ನಾಟಕಕ್ಕೆ ಬಂಪರ್ ಗಿಫ್ಟ್ ಘೋಷಣೆ

Twitter
Facebook
LinkedIn
WhatsApp
ಬೊಮ್ಮಾಯಿ ಸಂಪುಟದಿಂದ ಕರ್ನಾಟಕಕ್ಕೆ ಬಂಪರ್ ಗಿಫ್ಟ್ ಘೋಷಣೆ

ಬೆಂಗಳೂರು:ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. 

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. 

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡಲು ಮತ್ತು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶಕ್ಕೆ ಹೊಸ ಶಿಷ್ಯ ವೇತನ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಇದಕ್ಕಾಗಿ ಸರ್ಕಾರ 1 ಸಾವಿರ ಕೋಟಿ ಹಣ ಮೀಸಲಿಟ್ಟಿದೆ. 

ಈಗಾಗಲೇ ಜಾರಿಯಲ್ಲಿರುವ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆ 1200 ರೂಪಾಯಿಗಳಿಗೆ ಏರಿಕೆ ಮಾಡುತ್ತಿದ್ದು ಇದರಿಂದ 35 ಲಕ್ಷ ಫಲಾನುಭವಿಗಳಿಗೆ ಲಾಭ ಉಂಟಾಗಲಿದೆ. ಸರ್ಕಾರಕ್ಕೆ 863 ಕೋಟಿ ರೂಪಾಯಿ ಹೆಚ್ಚು ಖರ್ಚಾಗಲಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ 

ವಿಧವಾ ವೇತನವನ್ನೂ ಬೊಮ್ಮಾಯಿ ನೇತೃತ್ವದ ಸರ್ಕಾರ 600 ರಿಂದ 800 ರೂಪಾಯಿಗಳಿಗೆ ಏರಿಕೆ ಮಾಡಲಾಗಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ ಹಾಗೂ 414 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ. 

ಶೇ.40-70 ಅಂಗವೈಕಲ್ಯವಿರುವವರಿಗೆ ಮಾಸಿಕವಾಗಿ ಈಗ ನೀಡಲಾಗುತ್ತಿರುವ 600 ರೂಪಾಯಿಗಳ ವೇತನವನ್ನು 800 ರೂಗೆ ಏರಿಕೆ ಮಾಡಲಾಗಿದ್ದು, 3.66 ಸಾವಿರ ಫಲಾನುಭವಿಗಳು ಪ್ರಯೋಜನವಾಗಲಿದ್ದು ಸರ್ಕಾರದ ಬೊಕ್ಕಸಕ್ಕೆ 90 ಕೋಟಿ ಹೆಚ್ಚು ವೆಚ್ಚವಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.  

“ರೈತರ ಮಕ್ಕಳ ಉನ್ನತಿಯ ಬಗ್ಗೆ ಚಿಂತನೆ, ಬಡವರಿಗೆ ಸಹಾಯ ಮಾಡಲು ನನ್ನ ಸರ್ಕಾರದ ಆದ್ಯತೆ, ಈ ನಿಟ್ಟಿನಲ್ಲಿ ನನ್ನ ಚಿಂತನೆಯ ಮೊದಲ ಹೆಜ್ಜೆಯನ್ನು ಸಚಿವ ಸಂಪುಟದ ನಿರ್ಣಯದಲ್ಲಿ ಇಡಲಾಗಿದ್ದು, ಜನಕಲ್ಯಾಣ, ಬಡವ, ದೀನದಲಿತರ ಪರವಾಗಿ ಸರ್ಕಾರ ನಿಲ್ಲಲಿದೆ” ಎಂದು ಸಿಎಂ ಭರವಸೆ ನೀಡಿದ್ದಾರೆ. 

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ.

ವಿಶ್ವಾಸಾರ್ಹ, ದಕ್ಷ, ಪಾರದರ್ಶಕ ಆಡಳಿತ: ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಲಹೆ 

ವಿಶ್ವಾಸಾರ್ಹ, ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು.

ಬೊಮ್ಮಾಯಿ ಸಂಪುಟದಿಂದ ಕರ್ನಾಟಕಕ್ಕೆ ಬಂಪರ್ ಗಿಫ್ಟ್ ಘೋಷಣೆ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಆಡಳಿತ ಒಂದು ನಿರಂತರ ಪ್ರಕ್ರಿಯೆ. ಅದು ಎಂತಹ ಪರಿಸ್ಥಿತಿಯಲ್ಲೂ ಅನಿರ್ಬಂಧಿತವಾಗಿ ಕಾರ್ಯನಿರ್ವಹಿಸಬೇಕು. ರಾಜ್ಯದ ಜನತೆಗೆ ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತ ಕೊಡುವ ದಿಟ್ಟ ತೀರ್ಮಾನ ಕೈಗೊಂಡಿದ್ದೇನೆ. ಇದನ್ನು ಅನುಷ್ಠಾನ ಮಾಡುವುದು ಎಷ್ಟು ಕಷ್ಟ ಎಂಬುದನ್ನು ಅರಿತೇ ಈ ಮಾತನ್ನಾಡುತ್ತಿದ್ದೇನೆ ಎಂದು ತಿಳಿಸಿದರು.

ಪ್ರಗತಿಪರ, ಪರಿಣಾಮಕಾರಿ ಆಡಳಿತ ಕೊಟ್ಟ ಹೆಗ್ಗಳಿಕೆ ನಮ್ಮ ರಾಜ್ಯದ್ದು. ಬದಲಾದ ಪರಿಸ್ಥಿತಿಯಲ್ಲಿ ನಾವು ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡಬೇಕಾಗಿದೆ. ಸಚಿವ ಸಂಪುಟದ ನಿರ್ಣಯಗಳು ಕಾಲಮಿತಿಯಲ್ಲಿ ಅನುಷ್ಠಾನಗೊಳ್ಳಬೇಕು. ವಿಳಂಬವಾದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ಆಡಳಿತದಲ್ಲಿ ವಿಳಂಬ ಧೋರಣೆ ಕ್ಯಾನ್ಸರ್ ಇದ್ದಂತೆ. ಆದ್ದರಿಂದ ಸರ್ಕಾರದ ನಿರ್ಣಯಗಳು ನಿಗದಿತ ಕಾಲಮಿತಿಯಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎಲ್ಲ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ನೀತಿ, ನಿಯಮಾವಳಿಗಳು, ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟತೆಯನ್ನು ಹೊಂದಿದ್ದು ಕಾರ್ಯನಿರ್ವಹಿಸಬೇಕು. ಒಳ್ಳೆಯ ಕೆಲಸಗಳನ್ನು ಯಾವುದೇ ಹಿಂಜರಿಕೆಯಿಲ್ಲದೆ ಧೈರ್ಯದಿಂದ ಮಾಡಿ. ನನ್ನ ಸರ್ಕಾರ ನಿಮ್ಮೊಂದಿಗೆ ಇರುತ್ತದೆ ಎಂದು ತಿಳಿಸಿದರು.

ಪ್ರಸ್ತುತ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವುದು ಹಾಗೂ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ನಮ್ಮ ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಇಲಾಖೆಯಲ್ಲಿ ವರ್ಷಾಂತ್ಯದ ವೇಳೆಗೆ ಶೇ. 5 ರಷ್ಟು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು. ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

ನಿಗದಿತ ಕಾಲಮಿತಿಯಲ್ಲಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತಂಡ ಸ್ಫೂರ್ತಿಯಿಂದ ಕೆಲಸ ಮಾಡಬೇಕು. ಜೊತೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಮತ್ತೊಮ್ಮೆ ವಿವರವಾಗಿ ಚರ್ಚಿಸಿ, ಗೊಂದಲ ನಿವಾರಣೆಗೆ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು. ಇಲಾಖೆಗಳ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡುವ ಮೂಲಕ ದಕ್ಷತೆಯಿಂದ ಕಾರ್ಯನಿರ್ವಹಿಸುವ ಇಲಾಖೆಗಳಿಗೆ ಉತ್ತೇಜನ ನೀಡಲಾಗುವುದು ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು