ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೌಲಿಂಗ್‌ ಮಾಡುವಾಗ ಹಠಾತ್‌ ಹೃದಯ ಸ್ತಂಭನ; ಆಟಗಾರ ಮೃತ್ಯು

Twitter
Facebook
LinkedIn
WhatsApp
nayanthara latest hot hd photoswallpapers 1080p4k lalt lg 1

ಹೈದರಾಬಾದ್: ಕ್ರಿಕೆಟ್‌ ಆಡುವಾಗಲೇ ಕುಸಿದು ಬಿದ್ದು ಮೃತಪಟ್ಟ ಆಘಾತಕಾರಿ ಘಟನೆಯ ಸಾಲಿಗೆ ಮತ್ತೊಂದು ಘಟನೆ ಸೇರಿದೆ. ತೆಲಂಗಾಣದ ಹುಸ್ನಾಬಾದ್ ಪಟ್ಟಣದಲ್ಲಿ ಕ್ರಿಕೆಟ್‌ ಆಡುವಾಗ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

ಕರೀಂನಗರ ಜಿಲ್ಲೆಯ ಚಿಗುರುಮಾಮಿಡಿ ಮಂಡಲದ ಸುಂದಗಿರಿ ಗ್ರಾಮದ ಶನಿಗಾರಂ ಆಂಜನೇಯುಲು (37) ಮೃತ ವ್ಯಕ್ತಿ.ಸ್ಥಳೀಯ ಕೆಎಂಆರ್ ಕ್ರಿಕೆಟ್ ಟೂರ್ನಿಯ ವೇಳೆ ಬೌಲಿಂಗ್ ಮಾಡಲು ತಯಾರಿ ನಡೆಸುತ್ತಿದ್ದ ವೇಳೆ ಶನಿಗಾರಂ ಆಂಜನೇಯುಲು ಹೃದಯ ಸ್ತಂಭನವಾಗಿ (cardiac arrest) ಕುಸಿದು ಬಿದ್ದಿದ್ದಾರೆ. ಕೂಡಲೇ ಸಹ ಆಟಗಾರರು ಆಂಜನೇಯುಲು ಅವರಿಗೆ ಸಿಪಿಆರ್‌ ನೀಡಿ, ಆ್ಯಂಬ್ಯುಲೆನ್ಸ್‌ ಗೆ ಕರೆ ಮಾಡಿದ್ದಾರೆ. ಆಸ್ಪತ್ರೆಗೆ ಅವರನ್ನು ಸಾಗಿಸಿದ್ದಾರೆ. ಆದರೆ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚೆಗೆ ಕ್ರಿಕೆಟ್‌ ಆಡುವಾಗ ಹೃದಯಾಘಾತವಾಗಿ ಮೃತಪಡುವ ಘಟನೆ ಹೆಚ್ಚು ನಡೆಯುತ್ತಿದೆ. ಗುಜರಾತ್‌ನ ರಾಜ್‌ಕೋಟ್‌ ನಿವಾಸಿಯಾಗಿರುವ ಮಯೂರ್ (45), ಗುಜರಾತಿನ ಅಹಮದಾಬಾದ್ ನಲ್ಲಿ ವಸಂತ ರಾಥೋಡ್ (34) ಎಂಬ ಆಟಗಾರ, ರಾಜ್‌ ಕೋಟ್‌ ನಿವಾಸಿ ಪ್ರಶಾಂತ್ ಭರೋಲಿಯಾ (27), ಸೂರತ್‌ ಮೂಲದ ಜಿಗ್ನೇಶ್ ಚೌಹಾಣ್ (31) ಕ್ರಿಕೆಟ್‌ ಆಡುವಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ