ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ಕೇಸ್ – ನಟ ಚೇತನ್‌ಗೆ ಮತ್ತೆ ಸಮನ್ಸ್‌

Twitter
Facebook
LinkedIn
WhatsApp
ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ಕೇಸ್ – ನಟ ಚೇತನ್‌ಗೆ ಮತ್ತೆ ಸಮನ್ಸ್‌

ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆಂಬ ಆರೋಪದ ಮೇಲೆ ಈಗಷ್ಟೇ ಬಂಧನಕ್ಕೊಳಗಾಗಿದ್ದ ನಟ ಚೇತನ್‌ಗೆ ಮೇ 31ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಕಳೆದ ವರ್ಷ ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ನೀಡಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ 2ನೇ ಬಾರಿಗೆ ಸಮನ್ಸ್ ನೀಡಿದೆ.  ಇದನ್ನೂ ಓದಿ: ಬ್ರಾಹ್ಮಣ್ಯದ ವಿರುದ್ಧ ಪೋಸ್ಟ್ – ನಾಳೆ ನಟ ಚೇತನ್ ವಿಚಾರಣೆ

IPC (ಭಾರತೀಯ ದಂಡ ಸಂಹಿತೆ) ಸೆಕ್ಷನ್ 295A (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು), ಸೆಕ್ಷನ್ 153(1)C (ಹಗೆತನದ ಭಾವನೆಗಳು ಮೂಡುವಂತೆ ಪ್ರತಿಪಾದನೆ ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಇದೇ ಮೇ 31ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ನಟ ಚೇತನ್, ನಾನು ಅವರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2021ರ ಜೂನ್ 16ರಂದು ವಿಚಾರಣೆಗೆ ಹಾಜರಾಗಿದ್ದರು. ಇದೀಗ ಮತ್ತೆ ಸಮನ್ಸ್ ಬಂದಿದ್ದು, 2ನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಹಿನ್ನೆಲೆ ಏನು?: ನಟ ಚೇತನ್ ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡಿ, ಜಾತಿ ಜಾತಿಗಳ ನಡುವೆ ಗಲಭೆ ಉಂಟು ಮಾಡಲು ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಗಳು ಯು ಟ್ಯೂಬ್ , ಫೇಸ್ ಬುಕ್ ನಲ್ಲಿ ವೈರಲ್ ಆಗಿವೆ ಎಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್‌ಐಆರ್ ದಾಖಲಿಸಿದ್ದ ಬಸವನಗುಡಿ ಪೊಲೀಸರು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್ ನೀಡಿದ್ದರು.

ಈ ನೋಟಿಸ್‌ನಲ್ಲಿ ಬ್ರಾಹ್ಮಣ್ಯ, ಪುರೋಹಿತ ಶಾಹಿ, ಬ್ರಾಹ್ಮಣ ವಿರೋಧವಾಗಿ ಮಾತಾಡಿರುವ ವೀಡಿಯೋ ನಿಮ್ಮದೇನಾ? ನಿಮ್ಮ ಪಾಸ್ಪೋರ್ಟ್ ನಂಬರ್ ಏನು? ವೀಸಾ ಮಾಹಿತಿ ತಿಳಿಸಿ? ಶ್ರೇಣಿಕೃತ ಅಸಮಾನತೆಯ ವ್ಯವಸ್ಥೆಯಿಂದ ಪುರೋಹಿತ ಶಾಹಿ ವರ್ಗದವರಿಗೆ ಹೇಗೆ ಲಾಭವಾಗುತ್ತದೆ? ಹೀಗೆ 36 ಪ್ರಶ್ನೆಗಳನ್ನ ಕೇಳಿ ಉತ್ತರ ಪಡೆದಿದ್ದರು.

ವಿಚಾರಣೆ ಮುಗಿದ ಬಳಿಕ, ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಜಾತಿ, ಜನಾಂಗದ ವಿರುದ್ಧ ಹೋರಾಟ ಮಾಡುತ್ತಲ್ಲ. ಕೆಲವರು ಹುಟ್ಟಿದ ತಕ್ಷಣ ಶ್ರೇಷ್ಠ, ಕೆಲವರು ಕೀಳು ಅಂಥ ಮಾಡಬಾರದು. ಬೇಧ ಭಾವದ ವಿರುದ್ಧ ಹೋರಾಟ ಮಾಡುತ್ತೀವಿ. ಈ ಹೋರಾಟವನ್ನು ಮುಂದುವರಿಸುತ್ತೇವೆ. ನಮಗೆ ನ್ಯಾಯ ಸಿಗುತ್ತೆ. ವಿಚಾರಣೆಗೆ ಅಗತ್ಯವಿದ್ದಲ್ಲಿ ಮತ್ತೆ ಬರುತ್ತೇನೆ. 18ನೇ ತಾರೀಖು ಮತ್ತೆ ಬರುವುದಕ್ಕೆ ಹೇಳಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಸಂಪೂರ್ಣ ಉತ್ತರ ಕೊಡುತ್ತೇನೆ. ತನಿಖೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದು ಚೇತನ್ ಹೇಳಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ