ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ರಿಟನ್ ರಾಣಿ ಎಲಿಜಬೆತ್ -2 ವಿಧಿವಶ

Twitter
Facebook
LinkedIn
WhatsApp
ಬ್ರಿಟನ್ ರಾಣಿ ಎಲಿಜಬೆತ್ -2 ವಿಧಿವಶ

ಲಂಡನ್‌: ಬರೋಬ್ಬರಿ 70 ವರ್ಷಗಳ ಕಾಲ ಇಂಗ್ಲೆಂಡ್‌ ಅನ್ನು ಆಳಿದ್ದ ರಾಣಿ 2ನೇ ಎಲಿಜಬೆತ್‌(96) ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ದೀರ್ಘ‌ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಅಕ್ಟೋಬರ್‌ನಿಂದ ಸಾರ್ವಜನಿಕ ವಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಆದರೆ ಮಂಗಳವಾರ ಲಿಜ್‌ ಟ್ರಾಸ್‌ ಅವರನ್ನು ನೂತನ ಪ್ರಧಾನಿಯಾಗಿ ಅಧಿಕೃತವಾಗಿ ನೇಮಕ ಮಾಡಿದ ಕಾರ್ಯಕ್ರಮದಲ್ಲಿ ಸಂಪ್ರದಾಯದಂತೆ ರಾಣಿ ಭಾಗಿಯಾಗಿದ್ದರು. ಅದರ ಬೆನ್ನಲ್ಲೇ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು. ಗುರುವಾರ ಸ್ಕಾಟ್ಲೆಂಡ್‌ನ‌ಲ್ಲಿರುವ ನಿವಾಸದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ತಡರಾತ್ರಿ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದರು ಎಂದು ಬಕಿಂಗ್‌ಹ್ಯಾಂ ಅರಮನೆ ತಿಳಿಸಿದೆ.

ಬ್ರಿಟನ್ ರಾಣಿ ಎಲಿಜಬೆತ್ -2 ವಿಧಿವಶ

ರಾಣಿ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅರಮನೆಯ ವೈದ್ಯರ ಸಲಹೆ ಮೇರೆಗೆ, 2ನೇ ಎಲಿಜಬೆತ್‌ ಅವರ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಸ್ಕಾಟ್ಲೆಂಡ್‌ನ‌ ಬಲ್ಮೋರಾಲ್‌ನ ನಿವಾಸಕ್ಕೆ ಧಾವಿಸಿದ್ದರು. ಶುಕ್ರವಾರ ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಲಂಡನ್‌ಗೆ ಒಯ್ಯಲಾಗುತ್ತದೆ. ಯುಕೆಯಾದ್ಯಂತ 10 ದಿನಗಳ ಶೋಕಾಚರಣೆ ನಡೆಯಲಿದೆ. 2ನೇ ಎಲಿಜಬೆತ್‌ ಅವರು 1952ರ ಫೆ. 6ರಂದು ತಮ್ಮ 25ನೇ ವಯಸ್ಸಿನಲ್ಲಿ ರಾಣಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರ ಅಧಿಕಾರಾವಧಿಯಲ್ಲಿ 15 ಪ್ರಧಾನಿಗಳನ್ನು ನೋಡಿದ್ದಾರೆ. ವಿನ್‌ಸ್ಟನ್‌ ಚರ್ಚಿಲ್‌ರಿಂದ ಲಿಜ್‌ ಟ್ರಾಸ್‌ವರೆಗೆ  ಪ್ರಧಾನಿಗಳ ನೇಮಕವನ್ನು ಇವರು ಮಾಡಿದ್ದರು.

ರಾಣಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಯುಕೆ ಪ್ರಧಾನಿ ಲಿಜ್‌ ಟ್ರಾಸ್‌ ಸೇರಿದಂತೆ ಅನೇಕ ವಿಶ್ವನಾಯಕರು ಕಂಬನಿ ಮಿಡಿದಿದ್ದಾರೆ. 2ನೇ ಎಲಿಜಬೆತ್‌ ನಿಧನದ ಹಿನ್ನೆಲೆಯಲ್ಲಿ ಅವರ ಪುತ್ರ, ವೇಲ್ಸ್‌ನ ಮಾಜಿ ರಾಜಕುಮಾರ ಚಾರ್ಲ್ಸ್ ಅವರು “ರಾಜ’ನಾಗಿ ಪಟ್ಟಕ್ಕೇರಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ