ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Twitter
Facebook
LinkedIn
WhatsApp
ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ( CM Basavaraja Bommai) ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.  ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಭೇಟಿಯಾಗಿ  ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆಯ ಡಿಪಿಆರ್ ಗೆ ಒಪ್ಪಿಗೆ ನೀಡಲು ಮರು ಒತ್ತಾಯ ಮಾಡಲಾಗಿದೆ.


ಇನ್ನೊಮ್ಮೆ ಸರ್ವೋಚ್ಚ ನ್ಯಾಯಾಲಯದಲ್ಲಿ  ಕೃಷ್ಣ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯದ  ಎತ್ತರದ ಬಗ್ಗೆ ನ್ಯಾಯಮಂಡಳಿ  ಆದೇಶದ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಒತ್ತಡ ಹಾಕಬೇಕೆಂಬ ವಿಚಾರಗಳನ್ನು ಸುದೀರ್ಘವಾಗಿ  ಚರ್ಚಿಸಲಾಗಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ವಿತ್ತ ಸಚಿವರನ್ನು ಸಹ ಇಂದು ಭೇಟಿ ಮಾಡಲಾಯಿತು. 8633 ಕೋಟಿ  ರೂಗಳನ್ನು ರಾಜ್ಯಕ್ಕೆ 2 ವರ್ಷ ಸಮಯಾವಕಾಶವಿದ್ದರೂ ಬೇಗನೆ  ಬಿಡುಗಡೆ ಮಾಡಿದ್ದಾರೆ. ಅದಕ್ಕಾಗಿ ಧನ್ಯವಾದಗಳನ್ನು ಹೇಳಿ ಕೆಲವು ಲೆಕ್ಕಪತ್ರಗಳನ್ನು ಸಮನ್ವಯಗೊಳಿಸಿ ಉಳಿಯುವ ಮೊತ್ತವನ್ನು ಬಿಡುಗಡೆ ಮಾಡಲು ಸಹ  ಒತ್ತಾಯಿಸಲಾಗಿದೆ ಎಂದರು.

ಇಂದು ನಡೆದ ಜಿಎಸ್ ಟಿ ಸಚಿವ ಮಂಡಳಿ ಸಭೆಯಲ್ಲಿ 7 ರಾಜ್ಯಗಳ ಮಂತ್ರಿಗಳು ಭಾಗವಹಿಸಿದ್ದಾರೆ. ಇದೆ 27- 28 ರಂದು ನಡೆಯಲಿರುವ ಜಿಎಸ್.ಟಿ ಮಂಡಳಿ ಸಭೆಯಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸಲಾಗುವುದು ಎಂದರು.

ಆದಷ್ಟೂ ಬೇಗನೆ ಡಿಪಿಆರ್ ಅನುಮೋದನೆಯಾಗಬೇಕೆಂಬ   ಕರ್ನಾಟಕದ ನಿಲುವನ್ನು ತಿಳಿಸಿ ಸಭೆಯಲ್ಲಿಟ್ಟು ಕೂಡಲೇ ಅನುಮೋದನೆ ನೀಡಬೇಕೆಂದು ಮರು ಒತ್ತಾಯಿಸಲಾಗಿದೆ ಎಂದರು.

ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಅಗ್ನಿಪಥ್ ಯೋಜನೆ ಕುರಿತು ಪ್ರತಿಭಟನೆ ಗಳಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ  ನಿರಂತರವಾಗಿ   ಕ್ರಮಗಳನ್ನು  ತೆಗೆದುಕೊಳ್ಳಲಾಗಿದೆ. ನಿನ್ನೆಯಷ್ಟೇ, ಡಿಜಿಪಿ, ಎಡಿಜಿಪಿ, ಬೆಂಗಳೂರು ಪೊಲೀಸ್ ಆಯುಕ್ತರು, ಗೃಹ ಇಲಾಖೆ  ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಗೊಂದಲ , ಗಲಾಟೆಯಾಗಬಾರದು ಎಂದು ಸೂಚನೆ ನೀಡಿದ್ದೇನೆ ಎಂದರು.

ಅಗ್ನಿಪಥ ಯೋಜನೆ ಸದ್ದುದ್ದೇಶದಿಂದ ಆಗಿದೆ. 17 ರಿಂದ 21 ಕಲಿಯುವ ವಯಸ್ಸು. ಮಿಲಿಟರಿ ತರಬೇತಿ ಪಡೆದ ವ್ಯಕ್ತಿತ್ವ ಹೊರಬಂದಾಗ ಅವರಿಗೆ ವಿವಿದೆಡೆ ವಿಪುಲವಾದ ಅವಕಾಶ ದೊರೆಯುತ್ತದೆ. ಇಂತಹ ಯಾವುದೇ ರೀತಿಯ ಅವಕಾಶಗಳು ಇರಲಿಲ್ಲ. ಕೇವಲ ಒಂದು ದೃಷ್ಟಿಯಿಂದ ನೋಡದೆ ಒಂದು ದೊಡ್ಡ ತರಬೇತಿ ಪಡೆದ ಯುವ ಸಮೂಹ ಹೊರಬಂದರೆ ಸಮಾಜ ಉಪಯೋಗವಾಗಲಿದೆ. ಹೀಗೆ ಹಲವಾರು ವಿಚಾರಗಳಿವೆ. ಕೇಂದ್ರ ಸರ್ಕಾದಿಂದಲೂ ಇನ್ನಷ್ಟು ಸ್ಪಷ್ಟೀಕರಣ ಬರಲಿದೆ ಎಂದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist