ಬುಧವಾರ, ಮೇ 1, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತಕ್ಕೆ ಮೊದಲ ಚಿನ್ನ ಗೆದ್ದ ಮೀರಾಬಾಯಿ ಚಾನು: ಅಂದು ಕಟ್ಟಿಗೆ ಹೊತ್ತು... ಬಂಗಾರದ ಹುಡುಗಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ...

Twitter
Facebook
LinkedIn
WhatsApp
ಭಾರತಕ್ಕೆ ಮೊದಲ ಚಿನ್ನ ಗೆದ್ದ ಮೀರಾಬಾಯಿ ಚಾನು: ಅಂದು ಕಟ್ಟಿಗೆ ಹೊತ್ತು… ಬಂಗಾರದ ಹುಡುಗಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ…

ಕಾಮನ್‌ವೆಲ್ತ್ ಗೇಮ್ಸ್ 2022 ಗುರುವಾರದಿಂದ ಪ್ರಾರಂಭವಾಗಿದ್ದು, ಪದಕ ಬೇಟೆ ಮುಂದುವರೆಸಿದ ಭಾರತ ಶನಿವಾರ ವೇಟ್‌ಲಿಫ್ಟಿಂಗ್ ನಲ್ಲಿ ಚಿನ್ನ ಸೇರಿದಂತೆ ಒಂದೇ ದಿನ ಮೂರು ಪದಕಗಳನ್ನು ಪಡೆದುಕೊಂಡಿದೆ.

2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಮೊದಲ ಚಿನ್ನದ ಪದಕ ಗೆದ್ದುಕೊಂಡಿದೆ. ವೈಯ್ಟ್‌ಲಿಫ್ಟಿಂಗ್ ಮಹಿಳಾ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಆದರೆ, ಮೀರಾಬಾಯಿ ಈ ಮಟ್ಟದಲ್ಲಿ ಸಾಧನೆ ಮಾಡಲು ಅವರು ನಡೆದ ಬಂದ ಹಾದಿ ಸುಗಮವಾಗಿರಲಿಲ್ಲ.

ಟೋಕಿಯೊ ಒಲಂಪಿಕ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಇಂದು ವೇಟ್‌ಲಿಫ್ಟಿಂಗ್‌ನ 49 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಜಯಿಸುವ ಮೂಲಕ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಇಂದು ಒಂದು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 9ನೇ ಸ್ಥಾನದಲ್ಲಿದೆ.

ವೇಟ್ ಲಿಫ್ಟರ್ ಸಂಕೇತ್ ಮಹದೇವ್ ಸಾಗರ್ ಅವರು 55 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.  61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ.

ಮೀರಾಬಾಯಿ ಈ ಮಟ್ಟದಲ್ಲಿ ಸಾಧನೆ ಮಾಡಲು ಅವರು ನಡೆದ ಬಂದ ಹಾದಿ ಸುಗಮವಾಗಿರಲಿಲ್ಲ. 12ನೇ ವಯಸ್ಸಿನಲ್ಲಿ ಅಣ್ಣನಿಗಿಂತ ಹೆಚ್ಚು ಕಟ್ಟಿಗೆ ಹೊತ್ತು ಸಾಗುತ್ತ ತನ್ನ ಶಕ್ತಿ ಪ್ರದರ್ಶಿಸಿದ ಮೀರಾಬಾಯಿ ಚಾನು ಇಂದು ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿರುವುದು ಅವರ ಕ್ರೀಡಾ ಬದುಕಿನ ಇನ್ನೊಂದು ಮುಖ. ಒಂದು ಕಾಲದಲ್ಲಿ ಉರುವಲಿಗಾಗಿ ಕಾಡಿನಲ್ಲಿ ಕಟ್ಟಿಗೆ ಸಂಗ್ರಹಿಸಿ ಮನೆಗೆ ಕೊಂಡೊಯ್ಯುತ್ತಿದ್ದ ಮೀರಾಬಾಯಿ ಚಾನು ಮುಂದೊಂದು ದಿನ ಇದು ವೇಟ್ಲಿಫ್ಟಿಂಗ್​ಗೆ ನೆರವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಮಣಿಪುರದ ಪುಟ್ಟ ಹಳ್ಳಿಯಲ್ಲಿ ಜನಿಸಿದ್ದ ಮೀರಾಬಾಯಿ ಅವರ ಮನೆಯಲ್ಲಿ ಕ್ರೀಡಾಪಟುಗಳಿದ್ದರು. ತಂದೆ, ಅಣ್ಣಂದಿರು ಫುಟ್ಬಾಲ್, ಸೆಪೆಕ್ ಟಕ್ರಾಗಳಲ್ಲಿ ಆಡುತ್ತಿದ್ದರು.

2007ರಲ್ಲಿ ಅವರು ತಮ್ಮ ಮನೆಯಿಂದ 60 ಕಿ.ಮೀ ದೂರದಲ್ಲಿದ್ದ ಕುಮಾನ್ ಲಂಪಕ್ ಕ್ರೀಡಾ ಸಂಕೀರ್ಣದಲ್ಲಿ ಅಭ್ಯಾಸಕ್ಕೆ ಸೇರಿದರು. ಪ್ರತಿದಿನವೂ ತರಬೇತಿಗೆ ಹೋಗಿ ಬರುವ ಗಡಿಬಿಡಿಯಲ್ಲಿ ಸರಿಯಾದ ಊಟ ಕೂಡ ಸಿಗುತ್ತಿರಲಿಲ್ಲ. ಈವೇಳೆ ಸಾಕಷ್ಟು ಕಷ್ಟ ಅನುಭವಿಸಿದ ಮೀರಾ ಒಂದು ದಿನ ಅಮ್ಮನ ಬಳಿ ಬಂದು ನಾನು ವೇಟ್ಲಿಫ್ಟಿಂಗ್ ಬಿಡುತ್ತೇನೆ ಎಂದು ಹೇಳಿದ್ದರಂತೆ. ಆಗ ಅವರ ತಾಯಿ ಲೈಮಾ ನೀನು ಯಾವುದೇ ಯೋಚನೆ ಮಾಡಬೇಡ. ನಿನ್ನ ಊಟ, ವಿದ್ಯಾಭ್ಯಾಸ ಮತ್ತು ಪ್ರಯಾಣದ ವ್ಯವಸ್ಥೆಗಳನ್ನು ಮಾಡುತ್ತೇವೆ. ಶ್ರದ್ಧೆಯಿಂದ ಸಾಧನೆ ಮಾಡು ಎಂದು ಭರವಸೆ ನೀಡಿದರು.

ಮೀರಾಬಾಯಿ ರಿಯೊ ಡಿ ಜನೈರೊ 2016 ರಲ್ಲಿ ನಡೆದ ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸುವ ಅವಕಾಶ ಪಡೆದರು. ಆದರೆ ಇಲ್ಲಿ ಅವರಿಗೆ ಪದಕ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದ ಫಲದಿಂದ 21ನೇ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ದಾಖಲೆಯೊಂದಿಗೆ ದೇಶಕ್ಕೆ ಮೊದಲ ಚಿನ್ನ ತಂದುಕೊಟ್ಟರು. ಟೋಕಿಯೋ ಒಲಿಂಪಿಕ್ಸ್ 2020 ರ 49 ಕೆಜಿ ವಿಭಾಗದ ಮಹಿಳಾ ವೇಟ್ ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ವಿಶೇಷ ಸಾಧನೆ ಕೂಡ ಮಾಡಿದರು. ಅಲ್ಲದೆ ಕಳೆದ ವರ್ಷ ಒಲಿಂಪಿಕ್​ನಲ್ಲಿ ಮಹಿಳಾ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಪದಕ ಗೆದ್ದ ಎರಡನೇ ಮಹಿಳೆ ಎಂಬ ಗೌರವಕ್ಕೆ ಪಾತ್ರರಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ