ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಾರತೀಯರಿಗೆ ಜಪಾನ್‌ನಲ್ಲಿ ಹೆಚ್ಚಿನ ಉದ್ಯೋಗಾವಕಾಶ; ಹಿಂದಿ ಭಾಷೆಯಲ್ಲಿ ಜಪಾನೀಸ್‌ ಕಲಿಕೆಯ ಪುಸ್ತಕ ಮಾಂತೇನ್‌ ಬಿಡುಗಡೆ.

Twitter
Facebook
LinkedIn
WhatsApp
ಭಾರತೀಯರಿಗೆ ಜಪಾನ್‌ನಲ್ಲಿ ಹೆಚ್ಚಿನ ಉದ್ಯೋಗಾವಕಾಶ; ಹಿಂದಿ ಭಾಷೆಯಲ್ಲಿ ಜಪಾನೀಸ್‌ ಕಲಿಕೆಯ ಪುಸ್ತಕ ಮಾಂತೇನ್‌ ಬಿಡುಗಡೆ.

ಬೆಂಗಳೂರು: ಜಪಾನ್‌ ದೇಶದಲ್ಲಿ ವೃದ್ದಾಪ್ಯದಲ್ಲಿ ಇರುವವರ ಸಂಖ್ಯೆ ಹೆಚ್ಚಿದೆ. ಇವರ ಆರೈಕೆ, ಹಾಸ್ಪಿಟಾಲಿಟಿ, ಕೃಷಿ ಮತ್ತು ಇತರೆ ಕ್ಷೇತ್ರಗಳಲ್ಲೂ ಉದ್ಯೋಗಾವಕಾಶಗಳು ಹೆಚ್ಚಿದೆ. ಭಾರತೀಯರು ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಲು ನಾವೀಸ್‌ ಸಂಸ್ಥೆ ಹೊರ ತಂದಿರುವ ಹಿಂದಿ ಭಾಷೆಯಲ್ಲಿ ಜಪಾನೀಸ್‌ ಕಲಿಕೆಯ ವಿಶ್ವದಲ್ಲೇ ಪ್ರಪ್ರಥಮ ಪುಸ್ತಕ ಮಾಂತೇನ್‌ ನಂತಹ ಭಾರತೀಯ ಭಾಷೆಯ ಪುಸ್ತಕಗಳು ಸಹಾಯ ಮಾಡಲಿವೆ ಎಂದು ಜಪಾನ್‌ ದೇಶದ ರಾಯಭಾರಿ ಎಚ್‌. ಇ. ಸತೋಷಿ ಸುಜುಕಿ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ‘ನಾವೀಸ್‌ ಹ್ಯೂಮನ್‌ ರಿಸೋರ್ಸಸ್‌ ಪ್ರೈವೇಟ್‌ ಲಿಮಿಟೆಡ್‌ʼ ಸಂಸ್ಥೆಯು ಹೊರ ತಂದಿರುವ ಹಿಂದಿ ಭಾಷೆಯ ಮೂಲಕ ಜಪಾನೀಸ್‌ ಕಲಿಕೆಯ ವಿಶ್ವದ ಪ್ರಪ್ರಥಮ ಪುಸ್ತಕ ‘ಮಾಂತೇನ್‌ʼ ಎನ್ನುವ ಪುಸ್ತಕವನ್ನು ಬುಧವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಜಪಾನ್‌ ಹಾಗೂ ಭಾರತ ದೇಶ ಬಹಳ ಆತ್ಮೀಯ ಸಂಬಂಧವನ್ನು ಹೊಂದಿವೆ. ದಶಕಗಳ ಈ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಸಹಕಾರ ನೀಡುತ್ತಿದ್ದಾರೆ. ಜಪಾನ್‌ ದೇಶದಲ್ಲಿ ವೃದ್ದರ ಸಂಖ್ಯೆ ಹೆಚ್ಚಿದೆ. ಅವರ ಆರೈಕೆಗೆ ಅಗತ್ಯವಿರುವ ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲದ ಅಗತ್ಯತೆ ಹೆಚ್ಚಾಗಿದೆ. ಅದರಲ್ಲೂ ಜಪಾನೀಸ್‌ ಭಾಷೆಯನ್ನು ಕಲಿತಿರುವಂತಹ ಆರೈಕೆ ಕ್ಷೇತ್ರದ ಜನರಿಗೆ ಉತ್ತಮ ಬೇಡಿಕೆಯೂ ಇದೆ. ಜಪಾನ್‌ ದೇಶದಲ್ಲಿ ಉದ್ಯೋಗ ಪಡೆಯಲು ಜಪಾನೀಸ್‌ ಭಾಷೆಯನ್ನು ಕಲಿತಿರುವುದು ಕಡ್ಡಾಯ. ಆ ಭಾಷೆಯನ್ನು ಸುಲಭವಾಗಿ ಕಲಿಯುವ ನಿಟ್ಟಿನಲ್ಲಿ ಪ್ರಪ್ರಥಮವಾಗಿ ಭಾರತೀಯ ಭಾಷೆ ಹಿಂದಿಯಲ್ಲಿ ಹೊರ ತಂದಿರುವ ಮಾಂತೇನ್‌ (ಹಿಂದಿ-ಜಪಾನೀಸ್) ಪುಸ್ತಕ ಬಹಳಷ್ಟು ಅನುಕೂಲಕಾರಿಯಾಗಲಿದೆ. ಭಾರತೀಯ ಯುವ ಜನತೆ ಈ ಉದ್ಯೋಗಾವಕಾಶಗಳ ಸದುಪಯೋಗ ಪಡೆದುಕೊಳ್ಳುವಂತೆ ಜಪಾನ್‌ ದೇಶದ ರಾಯಭಾರಿ ಎಚ್‌. ಇ. ಸತೋಷಿ ಸುಜುಕಿ ಕರೆ ನೀಡಿದರು.

ನಾವೀಸ್‌ ಸಂಸ್ಥೆಯ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಸಂಬಂದಮ್‌ ರಾಜಕುಮಾರ್‌ ಮಾತನಾಡಿ, ನಮ್ಮ ಸಂಸ್ಥೆ ಜಪಾನ್‌ ದೇಶದ ಜೊತೆ ಉತ್ತಮ ಸಂಬಂಧ ಹೊಂದಿದೆ. ಭಾರತದಲ್ಲಿ ಜಪಾನ್‌ ಭಾಷೆ ಕಲಿಸುವ ತರಬೇತಿ ಕೇಂದ್ರವಾಗಿರುವ ನಾವೀಸ್‌, ಕಳೆದ 20 ವರ್ಷಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿಗೆ ಜಪಾನ್‌ ಭಾಷೆಯ ತರಬೇತಿ ನೀಡಿದೆ. ನಾವೀಸ್‌ ಸಂಸ್ಥೆಯಲ್ಲಿ ಜಪಾನ್‌ ಭಾಷೆ ಕಲಿಸುವ 13 ಬೋಧಕರಿದ್ದು ಎಲ್ಲರೂ ಜಪಾನ್ ದೇಶಿಯರಾಗಿದ್ದಾರೆ. ಹಾಗೆಯೇ, ಜಪಾನೀಸ್ ಭಾಷೆಯಲ್ಲಿ ತರಬೇತಿ ಪಡೆದ ಶಿಕ್ಷಕರಾಗಿದ್ದಾರೆ. ಜಪಾನ್‌ ಭಾಷೆಯನ್ನು ಹೆಚ್ಚು ಹೆಚ್ಚು ಜನರಿಗೆ ಕಲಿಸಬೇಕು ಎನ್ನುವ ಮಹಾತ್ವಾಕಾಂಕ್ಷೆ ಹೊಂದಿರುವ ಸಂಸ್ಥೆ, ಫೆಬ್ರುವರಿ 2021 ರಲ್ಲಿ ಇಂಗ್ಲಿಷ್‌ – ಜಪಾನೀಸ್ ಪುಸ್ತಕದ ಆವೃತ್ತಿಯನ್ನು ಬಿಡುಗಡೆಗೊಳಿಸಿತ್ತು. ವಿಶೇಷ ಕೌಶಲ ಬಯಸುವ ಉದ್ಯಮದಲ್ಲಿ ತೊಡಗಿರುವವರಿಗಾಗಿ ಇಂಗ್ಲಿಷ್‌ ಆವೃತ್ತಿಯನ್ನು ಮಾರುಕಟ್ಟೆಗೆ ಪರಿಚಯಿಸಿದ್ದ ಸಂಸ್ಥೆಯು ಇದೀಗ ಹಿಂದಿ ಮಾತೃ ಭಾಷಿಗರಿಗೆ ಸುಲಭವಾಗಲೆಂದು ಹಿಂದಿ ಆವೃತ್ತಿಯನ್ನು ಬಿಡುಗಡೆಗೊಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist