ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ್ ಜೋಡೋ ಯಾತ್ರೆಯಲ್ಲಿ ಸಾವರ್ಕರ್ ಫೋಟೋ, ಸಾಮಾಜಿಕ ಜಾಲತಾಣದಲ್ಲಿ ವೈರಲ್!!

Twitter
Facebook
LinkedIn
WhatsApp
ಭಾರತ್ ಜೋಡೋ ಯಾತ್ರೆಯಲ್ಲಿ ಸಾವರ್ಕರ್ ಫೋಟೋ, ಸಾಮಾಜಿಕ ಜಾಲತಾಣದಲ್ಲಿ ವೈರಲ್!!

ಕೇರಳ(ಸೆ.21): ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಸದ್ಯ ಕೇರಳದಲ್ಲಿ ಭಾರಿ ಬೆಂಬಲದೊಂದಿಗೆ ಸಂಚರಿಸುತ್ತಿದೆ. ಆದರೆ ಈ ಯಾತ್ರೆ ಕಾಂಗ್ರೆಸ್ ರಾಜಕೀಯವಾಗಿ ಸಂಚಲನ ಸೃಷ್ಟಿಸುತ್ತಿದೆ. ಇದೀಗ ಕೇರಳದ ಕೊಚ್ಚಿಯಲ್ಲಿ ಭಾರತ್ ಜೋಡೋ ಯಾತ್ರೆ ಸ್ವಾಗತಿಸಲು ಸ್ವಾತಂತ್ರ್ಯ ವೀರರ ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್‌ನಲ್ಲಿ ವೀರ ಸಾವರ್ಕರ್ ಫೋಟೋ ಹಾಕಲಾಗಿದೆ. ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಸಾರಿದ್ದ ಕಾಂಗ್ರೆಸ್ ಇದೀಗ ಸಾವರ್ಕರ್ ಫೋಟೋ ಹಾಕಿ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಕೇರಳ ಕಾಂಗ್ರೆಸ್ ಸ್ಥಳಕ್ಕೆ ಧಾವಿಸಿ ವೀರ ಸಾವರ್ಕರ್ ಫೋಟೋ ಮೇಲೆ ಮಹಾತ್ಮಾ ಗಾಂಧಿ ಫೋಟೋ ಅಂಟಿಸಿದೆ. ಬಳಿಕ ಇದು ಪ್ರಿಂಟಿಂಗ್ ಮಿಸ್ಟೇಕ್ ಎಂದು ಸ್ಪಷ್ಟನೆ ನೀಡಿದೆ.

ಅಲುವಾದಲ್ಲಿ(Kerala Aluva) ಈ ಬ್ಯಾನರ್ ಹಾಕಲಾಗಿತ್ತು. ದೇಶದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರ ಜೊತೆಯಲ್ಲಿ ವೀರ ಸಾವರ್ಕರ್ಫೋಟೋ ಕೂಡ ಹಾಕಲಾಗಿತ್ತು. ಈ ಬ್ಯಾನರ್ ಕುರಿತು ಆಲುವಾದ ಸಿಪಿಎಂ ನಾಯಕ ಪ್ರಶ್ನಿಸಿದ್ದಾರೆ. ವೀರ ಸಾವರ್ಕರ್ ವಿರುದ್ಧವೇ ಹೋರಾಡಿದ ಕಾಂಗ್ರೆಸ್(Congress) ಇದೀಗ ಸಾವರ್ಕರ್ ಫೋಟೋ ಹಾಕಿದೆ ಎಂದಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಆಲವಾದ ಕಾಂಗ್ರೆಸ್ ನಾಯಕರು ಸ್ಥಳೀಯ ಪ್ರಿಂಟಿಂಗ್ ಶಾಪ್‌ನಲ್ಲಿ ಪ್ರಮುಖ ಸ್ವಾತಂತ್ರ್ಯ ವೀರರ ಬ್ಯಾನರ್ ಮಾಡಿಕೊಡುವಂತೆ ಸೂಚನೆ ನೀಡಲಾಗಿತ್ತು. ಪ್ರಿಂಟಿಂಗ್ ಶಾಪ್‌ನವರು ಈ ಫೋಟೋವನ್ನು ಸೇರಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ಸಾವರ್ಕರ್ ಫೋಟೋ, ಸಾಮಾಜಿಕ ಜಾಲತಾಣದಲ್ಲಿ ವೈರಲ್!!

ಈ ಬ್ಯಾನರ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ. ಸತ್ಯವನ್ನು ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ. ಹೊರಗೆ ಬಂದೇ ಬರುತ್ತೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಇನ್ನೂ ಕೆಲವರು ಕಾಂಗ್ರೆಸ್ ಕೊನೆಗೂ ಸತ್ಯ ಒಪ್ಪಿಕೊಂಡಿದೆ ಎಂದಿದ್ದಾರೆ. ಇತ್ತ ಬಿಜೆಪಿ ಐಟಿ ಸೆಲ್‌ನ ಅಮಿತ್ ಮಾಳವಿಯಾ ಖಡಕ್ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿಗೆ ಸತ್ಯದ ಅರಿವಾಗಿದೆ. ಇದು ಉತ್ತಮ ಬೆಳವಣಿಗೆ. ರಾಹುಲ್ ಗಾಂಧಿ ಅಜ್ಜ ನೆಹರೂ ಪಂಜಾಬ್‌ನ ನಭಾ ಜೈಲಿನಲ್ಲಿ ಕೇವಲ ಎರಡು ವಾರ ಕಳೆದ ಬಳಿಕ ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದು ಹೊರಬಂದಿದ್ದರು ಎಂದು ಟ್ವೀಟ್ ಮಾಡಿದ್ದಾರೆ. ಸಾವರ್ಕರ್ ಫೋಟೋ ಇದೀಗ ಕಾಂಗ್ರೆಸ್‌ಗೆ ಇರಿಸು ಮುರಿಸು ತಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ