ಮಂಗಳವಾರ, ಮೇ 14, 2024
ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಸೆಮಿಫೈನಲ್; ಟಿ20 ವಿಶ್ವಕಪ್​ನಲ್ಲಿಂದು ಹೈವೋಲ್ಟೇಜ್ ಪಂದ್ಯ

Twitter
Facebook
LinkedIn
WhatsApp
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಸೆಮಿಫೈನಲ್; ಟಿ20 ವಿಶ್ವಕಪ್​ನಲ್ಲಿಂದು ಹೈವೋಲ್ಟೇಜ್ ಪಂದ್ಯ

 ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿ ಅಂತಿಮ ಹಂತದತ್ತ ತಲುಪುತ್ತಿದೆ. ಇಂದು ಕೇಪ್​ಟೌನ್​ನ ನ್ಯೂಲೆಂಡ್ಸ್ ಮೈದಾನದಲ್ಲಿ ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವೆ ಮೊದಲ ಸೆಮಿ ಫೈನಲ್ ಪಂದ್ಯ ಆಯೋಜಿಸಲಾಗಿದೆ. ಇಲ್ಲಿ ಗೆದ್ದ ತಂಡ ಫೈನಲ್​ಗೆ ಲಗ್ಗೆಯಿಡಲಿದೆ. ಕಾಂಗರೂ ಮಹಿಳೆಯರ ವಿರುದ್ಧ ಅತಿ ಹೆಚ್ಚು ಸೋಲಿನ ಕೆಟ್ಟ ದಾಖಲೆ ಹೊಂದಿರುವ ಟೀಮ್ ಇಂಡಿಯಾ ಈ ಹೈವೋಲ್ಟೇಜ್ ಕದನದಲ್ಲಿ ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದು ಕುತೂಹಲ ಕೆರಳಿಸಿದೆ. ಅಲ್ಲದೆ 2020ರ ಟೂರ್ನಿಯ ಫೈನಲ್‌ನಲ್ಲಿ ಅನುಭವಿಸಿದ್ದ ಸೋಲಿಗೆ ಸೇಡು ತೀರಿಸುವ ಅವಕಾಶ ಭಾರತಕ್ಕೆ ಲಭಿಸಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಜಯ ಹಾಗೂ ಒಂದು ಸೋಲಿನೊಂದಿಗೆ 6 ಅಂಕ ಸಂಪಾದಿಸಿರುವ ಟೀಮ್ ಇಂಡಿಯಾ +0.253 ರನ್​ರೇಟ್​ನೊಂದಿಗ ಗ್ರೂಪ್​​ ಬಿಯಲ್ಲಿ ಎರಡನೇ ಸ್ಥಾನ ಪಡೆದು ಸೆಮೀಸ್​ಗೆ ಕ್ವಾಲಿಫೈ ಆಗಿತ್ತು. ಇತ್ತ ಆಸೀಸ್ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದೆ ಆಡಿದ ಎಲ್ಲ ನಾಲ್ಕು ಪಂದ್ಯಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿ 8 ಅಂಕದೊಂದಿಗೆ +2.149 ರನ್​ರೇಟ್​ನೊಂದಿಗೆ ನಾಲ್ಕರ ಘಟ್ಟಕ್ಕೆ ಎಂಟ್ರಿ ನೀಡಿದೆ.

ಹಿಂದಿನ ದಾಖಲೆಗಳನ್ನು ಗಮನಿಸುವುದಾದರೆ ಭಾರತ ವಿರುದ್ಧ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಉಭಯ ತಂಡಗಳು ಈವರೆಗೆ ಒಟ್ಟು 30 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಭಾರತ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದರೆ ಕಾಂಗರೂ ಪಡೆ 22 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯ ಫಲಿತಾಂಶ ಇಲ್ಲದೆ ಅಂತ್ಯಕಂಡಿದೆ.

ಭಾರತದ ಬ್ಯಾಟಿಂಗ್ ವಿಭಾಗದ ಪ್ರಮುಖ ಅಸ್ತ್ರವಾಗಿರುವ ಸ್ಮೃತಿ ಮಂಧಾನ ಭರ್ಜರಿ ಫಾರ್ಮ್​ನಲ್ಲಿರುವುದು ತಂಡದ ಪ್ಲಸ್ ಪಾಯಿಂಟ್. ಇವರು ಕಳೆದ ಎರಡು ಪಂದ್ಯಗಳಲ್ಲಿ ಸತತವಾಗಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇಂಗ್ಲೆಂಡ್ 52 ರನ್ ಗಳಿಸಿದರೆ, ಐರ್ಲೆಂಡ್​ ವಿರುದ್ಧ 87 ರನ್​ ಚಚ್ಚಿದ್ದರು. ಶಫಾಲಿ ವರ್ಮಾ ಹಾಗೂ ರಿಚಾ ಘೋಷ್ ಸಾಥ್ ನೀಡುತ್ತಿದ್ದಾರೆ. ಆದರೆ, ನಾಯಕಿ ಹರ್ಮನ್​ಪ್ರೀತ್​ ಕೌರ್, ಜೆಮಿಯಾ ರೋಡ್ರಿಗಸ್ ಬ್ಯಾಟ್​ನಿಂದ ರನ್ ಬರದಿರುವುದು ದೊಡ್ಡ ತಲೆನೋವಾಗಿದೆ.

ಭಾರತದ ಬೌಲಿಂಗ್ ವಿಭಾಗದಲ್ಲಿ ರೇಣುಕಾ ಸಿಂಗ್ ಠಾಕೂರ್ ಪ್ರಮುಖ ಅಸ್ತ್ರವಾಗಿದ್ದಾರೆ. ಅವರ ಸ್ವಿಂಗ್ ಬಾಲ್ ಎದುರಾಳಿಗಳನ್ನು ಕಂಗೆಡಿಸುವುದರಲ್ಲಿ ಅನುಮಾನವಿಲ್ಲ. ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್ ಮಿಂಚಿದರೆ ಆಸ್ಟ್ರೇಲಿಯಾ ಬಲಿಷ್ಠ ಬ್ಯಾಟಿಂಗ್ ಪಡೆಗೆ ಕಡಿವಾಣ ಹಾಕಬಹುದಾಗಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಸೆಮಿ ಫೈನಲ್ ಕದನ ಭಾರತೀಯ ಕಾಲಮಾನದ ಪ್ರಕಾರ ಸಂಜೆ 6:30ಕ್ಕೆ ಶುರುವಾಗಲಿದೆ. 6 ಗಂಟೆಗೆ ಟಾಸ್ ಪ್ರಕ್ರಿಯೆ ಆಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ನೋಡಬಹುದು.

ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ರಾಧಾ ಯಾದವ್, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ, ರೇಣುಕಾ ಠಾಕೂರ್, ಅಂಜಲಿ ಸರ್ವಾಣಿ.

ಆಸ್ಟ್ರೇಲಿಯಾ ಮಹಿಳಾ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಡಾರ್ಸಿ ಬ್ರೌನ್, ಆಶ್ಲೀಗ್ ಗಾರ್ಡ್ನರ್, ಕಿಮ್ ಗಾರ್ತ್, ಹೀದರ್ ಗ್ರಹಾಂ, ಗ್ರೇಸ್ ಹ್ಯಾರಿಸ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ತಾಲಿಯಾ ಮೆಕ್‌ಗ್ರಾತ್, ಬೆತ್ ಮೂನಿ, ಎಲಿಸ್ಸಾ ಪೆರಿ, ಮೇಗನ್ ಶುಟ್, ಅನ್ನಾಬೆಲ್ ಸದರ್ಲ್ಯಾಂಡ್, ಜಾರ್ಜಿಯಾ ವೇರ್ಹ್ಯಾಮ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ