ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ ವಿರುದ್ಧ 5 ರನ್​ಗಳ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ; ಟೀಮ್ ಇಂಡಿಯಾದ ಟಿ20 ವಿಶ್ವಕಪ್ ಕನಸು ಭಗ್ನ

Twitter
Facebook
LinkedIn
WhatsApp
ಭಾರತ ವಿರುದ್ಧ 5 ರನ್​ಗಳ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ; ಟೀಮ್ ಇಂಡಿಯಾದ ಟಿ20 ವಿಶ್ವಕಪ್ ಕನಸು ಭಗ್ನ

ICC Womens T20 World Cup 2023: ಸೌತ್ ಆಫ್ರಿಕಾದ ಕೇಪ್​ಟೌನ್​ನಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ 5 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ಮಹಿಳಾ ಟಿ20 ವಿಶ್ವಕಪ್​ ಫೈನಲ್​ಗೆ ಪ್ರವೇಶಿಸಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸೀಸ್ ತಂಡಕ್ಕೆ ಅಲಿಸಾ ಹೀಲಿ (25) ಹಾಗೂ ಬೆತ್ ಮೂನಿ (54) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೆಗ್ ಲನ್ನಿಂಗ್ 34 ಎಸೆತಗಳಲ್ಲಿ ಅಜೇಯ 49 ರನ್ ಬಾರಿಸಿದರು.

ಹಾಗೆಯೇ ಕೇವಲ 18 ಎಸೆತಗಳಲ್ಲಿ 31 ರನ್​ ಬಾರಿಸುವ ಮೂಲಕ ಗಾರ್ಡನರ್ ಅಬ್ಬರಿಸಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 172 ಕ್ಕೆ ಬಂದು ನಿಂತಿತು. 

ಈ 173 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ (9) ಹಾಗೂ ಸ್ಮೃತಿ ಮಂಧಾನ (2) ಬೇಗನೆ ನಿರ್ಮಿಸಿದರು. ಆ ಬಳಿಕ ಬಂದ ಯಶಿಕಾ ಭಾಟಿಯಾ (4) ರನೌಟ್ ಆಗಿ ಹೊರನಡೆದರು.

ಈ ಹಂತದಲ್ಲಿ ಜೊತೆಗೂಡಿದ ಜೆಮಿಮಾ ರೋಡ್ರಿಗಸ್ ಹಾಗೂ ನಾಯಕಿ ಹರ್ಮನ್​ಪ್ರೀತ್ ಕೌರ್ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು. 4ನೇ ವಿಕೆಟ್​ಗೆ 69 ರನ್​ಗಳ ಜೊತೆಯಾಟವಾಡುವ ಮೂಲಕ ಈ ಜೋಡಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಹಂತದಲ್ಲಿ 24 ಎಸೆತಗಳಲ್ಲಿ 43 ರನ್ ಬಾರಿಸಿದ ಜೆಮಿಮಾ ಔಟಾದರು.

ಮತ್ತೊಂದೆಡೆ ಅರ್ಧಶತಕ ಪೂರೈಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದ ಹರ್ಮನ್​ಪ್ರೀತ್ ಕೌರ್ (52) ಹಾಫ್ ಸೆಂಚುರಿ ಬೆನ್ನಲ್ಲೇ ರನೌಟ್​ಗೆ ಬಲಿಯಾದರು. ಇದರ ಬೆನ್ನಲ್ಲೇ ರಿಚಾ ಘೋಷ್ (14) ಕೂಡ ವಿಕೆಟ್ ಕೈಚೆಲ್ಲಿದರು. ಪರಿಣಾಮ ಕೊನೆಯ 4 ಓವರ್​ಗಳಲ್ಲಿ ಟೀಮ್ ಇಂಡಿಯಾಗೆ 38 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದೀಪ್ತಿ ಶರ್ಮಾ ಹಾಗೂ ಸ್ನೇಹ್ ರಾಣಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಂತೆ ಕೊನೆಯ 12 ಎಸೆತಗಳಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 20 ರನ್​ಗಳು ಬೇಕಿತ್ತು. 19ನೇ ಓವರ್​ನ ಕೊನೆಯ ಎಸೆತದಲ್ಲಿ ಸ್ನೇಹ್ ರಾಣಾ (11) ಬೌಲ್ಡ್ ಆದರು. ಕೊನೆಯ ಓವರ್​ನಲ್ಲಿ 16 ರನ್​ಗಳ ಟಾರ್ಗೆಟ್ ಪಡೆದ 10 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಆಸ್ಟ್ರೇಲಿಯಾ ತಂಡವು 5 ರನ್​ಗಳ ರೋಚಕ ಜಯ ಸಾಧಿಸಿ ಫೈನಲ್​ಗೆ ಪ್ರವೇಶಿಸಿತು. (ಸಂಕ್ಷಿಪ್ತ ಸ್ಕೋರ್: ಆಸ್ಟ್ರೇಲಿಯಾ- 172/4 (20), ಭಾರತ- 167/8 (20).

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ