ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಅಪಘಾತ: ಟ್ರಕ್-ಕಾರು ಮುಖಾಮುಖಿ ಡಿಕ್ಕಿ, 9 ಮಂದಿ ದುರ್ಮರಣ

Twitter
Facebook
LinkedIn
WhatsApp
maharashtra 710x400xt

ಮುಂಬೈ: ಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು, ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳಿದ್ದವರು ಕಾರಿನಲ್ಲಿ ಗೋವಾಕ್ಕೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ದುರ್ಘಟನೆಯಲ್ಲಿ 4 ವರ್ಷದ ಮಗು ಪವಾಡಸದೃಢ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ. ಮಗುವಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಟ್ರಕ್ ಮುಂಬೈಗೆ ತೆರಳುತ್ತಿದ್ದಾಗ, ಕಾರು ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ತೆರಳುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Maha 11 killed 24 injured in two accidents on Mumbai Goa highway V jpg 442x260 4g

ಮೃತರಲ್ಲಿ ಐವರು ಪುರುಷರು, ಮಗು ಹಾಗೂ ಮೂವರು ಮಹಿಳೆಯರು ಸೇರಿದ್ದಾರೆ. ಹೆದ್ದಾರಿಯಲ್ಲಿ ಸಂಚಾರ ಪುನರಾರಂಭಗೊಂಡಿದ್ದು, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ