ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಅಪಘಾತ: ಬಸ್ಸು ಲಾರಿಗಳ ನಡುವೆ ಸಿಲುಕಿಕೊಂಡ ಬೈಕ್!

Twitter
Facebook
LinkedIn
WhatsApp
Accident In Bengaluru

ಬೆಂಗಳೂರು: ನಗರದ ನಾಯಂಡಹಳ್ಳಿ ಬಳಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅದೃಷ್ಟವಶಾತ್ ಮಗು ಹಾಗೂ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಮೆಂಟ್ ತುಂಬಿದ್ದ ಲಾರಿ ಬೈಕ್​​ ಮೇಲೆ ಹರಿದು ಬಳಿಕ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದೆ. ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಅನುಷಾ ತಲೆ ಛಿದ್ರವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಅಪಘಾತದಲ್ಲಿ ಮೃತ ಅನುಷಾ ತಾಯಿ ವೃದ್ಧೆ ವನಜಾಕ್ಷಿ ಹಾಗೂ ಮಗ ಆರ್ಯಗೆ ಗಂಭೀರ ಗಾಯಗಳಾಗಿವೆ.

ಬೆಂಗಳೂರಿನ ನಾಯಂಡಹಳ್ಳಿ ಬಳಿ ಇಂದು ಈ ಭೀಕರ ಅಪಘಾತ ಸಂಭವಿಸಿದ್ದು, ಮಂಡ್ಯ ಮೂಲದ ಅನುಷಾ ಸಾವಿಗೀಡಾದ ಮಹಿಳೆ. ಈಕೆ ತನ್ನ ತಾಯಿ ಮತ್ತು 7 ವರ್ಷದ ಮಗುವನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ದೀಪಾಂಜಲಿನಗರ ಕಡೆಯಿಂದ ಬರುತ್ತಿದ್ದರು. ಈ ಸಂದರ್ಭದಲ್ಲಿ ಸಿಮೆಂಟ್ ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಬೈಕ್​ ಮೇಲೆ ಹರಿದು ಬಳಿಕ ಕೆಎಸ್​ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಅನುಷಾ ತಲೆ ಮೇಲೆ ಹರಿದಿದೆ. ಇನ್ನು ಅಜ್ಜಿ ವನಜಾಕ್ಷಿಯ ಎರಡು ಕಾಲುಗಳ ಕಟ್ ಆಗಿದ್ದು, ಮಗುವಿಗೂ ಸಹ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನು ನೋಡಿದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಪ್ರತಿಭಟನೆ ನಡೆಸಿದರು. ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದ್ದರಿಂದ ಲಾರಿ ನಿಂತಿದೆ. ಇಲ್ಲದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎನ್ನಲಾಗಿದೆ. ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಲಾರಿಗೆ ಕಲ್ಲು ತೂರಿದ್ದು, ಮುಂಭಾಗದ ಗಾಜುಗಳು ಒಡೆದುಹೋಗಿವೆ.

ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಆಗಮಿಸಿ ಪ್ರತಿಭಟನೆಕಾರರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ಇನ್ನು ಘಟನೆ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್​ ಆಗಿದ್ದು, ಆ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಚಾಲಕನ್ನು ಹಿಡಿಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ