ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ, ಸ್ಥಳದಲ್ಲೇ 6 ಮಂದಿ ಸಾವು!
Twitter
Facebook
LinkedIn
WhatsApp
ಕೊಪ್ಪಳ: ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಈ ಅಪಘಾತ ಸಂಭವಿಸಿದೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಲಾರಿ ಹಾಗೂ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮೀಕಾ ಮೃತಪಟ್ಟವರು.
ಇಂಡಿಕಾ ಕಾರು ವಿಜಯಪುರಿಂದ ಬೆಂಗಳೂರಿನ ಕಡೆಗೆ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಟಯರ್ ಸ್ಫೋಟಗೊಂಡು ರಸ್ತೆಯ ಇನ್ನೊಂದು ಬದಿಗೆ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಮೃತದೇಹಗಳನ್ನು ತೆಗೆಯಲು ಹರಸಾಹಸ ಪಡುವಂತಾಗಿದೆ. ಈ ಅಪಘಾತ ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.