ಸೋಮವಾರ, ಜುಲೈ 1, 2024
ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!-ಉಜಿರೆ: ಭೀಕರ ರಸ್ತೆ ಅಪಘಾತ ; ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು..!-11-21% ಟಾರಿಪ್ ಹೆಚ್ಚಿಸಿದ ಏರ್ಟೆಲ್; ಜುಲೈ 3 ರಿಂದ ಯಾವ ಪ್ಲಾನ್ ಗೆ ಹೇಗಿದೆ ದರ.?-ಕಾರ್ಕಳ: ಬಸ್ ಚಲಾವಣೆ ವೇಳೆ ಅಸ್ವಸ್ಥಗೊಂಡ ಚಾಲಕ; ಹಿಮ್ಮುಖವಾಗಿ ಬಸ್ ಚಲಿಸಿ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು.!-ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್; ಕಾಂಗ್ರೆಸ್ ಗಂಭೀರ ಆರೋಪ-ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ

Twitter
Facebook
LinkedIn
WhatsApp
ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ

ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಹಾವೇರಿ ಬಳಿ ನಡೆದಿದೆ. ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. 

ಶಿವಮೊಗ್ಗ ಮೂಲದ 15 ಜನರು ಟಿಟಿ ವಾಹನದಲ್ಲಿ ಗುರುವಾರ (ಜೂ.27) ರಂದು ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ದೇವಿ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳಿ ಊರಿಗೆ ಹೋಗುವಾಗ ಭೀಕರ ಅಪಘಾತ ಸಂಭವಿಸಿದೆ. 

ಮೃತರನ್ನು ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್ (40), ನಾಗೇಶ್ (18) ಯಲ್ಲಪ್ಪ (65), ಗಣೇಶಪ್ಪ (65), ರಂಗನಾಥ ಸ್ವಾಮಿ (62) ಮತ್ತು ಇವರ 6 ಮತ್ತು 4 ವರ್ಷದ ಇಬ್ಬರು ಮಕ್ಕಳು, ಚಾಲಕ ನಾಗೇಶ್ (23), ಶರಣಪ್ಪ (24), ಪರಶುರಾ (40), ಮಂಜುಳಾ ರಾಮಕೃಷ್ಣ (50) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಒಂಬತ್ತು ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಮಾಹಿತಿ ನೀಡಿದರು.

ಕಾರು ಕಣಿವೆಗೆ ಬಿದ್ದು ಓರ್ವ ಸಾವು :

ಕಾರು ಕಣಿವೆಗೆ ಬಿದ್ದು ಓರ್ವ ಸಾವು

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಉರುಳಿದ ಪರಿಣಾಮ ಇಂದು ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಅಪಘಾತ ಸಂಭವಿಸಿದಾಗ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು.

ಜುಡ್ಡಾದಿಂದ ಕೂರಿ ಮಾರ್ಗವಾಗಿ ಸವಳ್ಳಾ ನಾಲಾ ಬಳಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಕಾರು ನಂತರ ಕಮರಿಗೆ ಬಿದ್ದಿತು. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಸಂತ್ರಸ್ತರ ಗುರುತು ಇನ್ನೂ ದೃಢಪಟ್ಟಿಲ್ಲ.

ಏರ್‌ಪೋರ್ಟ್‌ನ ಛಾವಣಿ ಕುಸಿದು 6 ಮಂದಿಗೆ ಗಾಯ

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ (Delhi Airport) ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿ ಗಾಯಗೊಂಡ ಘಟನೆ ನಡೆದಿದೆ. ಇಂದು ಮುಂಜಾನೆ 5.30ಕ್ಕೆ ಈ ಅವಘಡ ಸಂಭವಿಸಿದೆ. ಭಾರೀ ಮಳೆಯ ಪರಿಣಾಮ ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ.

ಘಟನೆ ನಡೆದ ಕೂಡಲೇ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದು,  ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.

ಸದ್ಯ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಛಾವಣಿ ಕುಸಿತದಿಂದ ಟ್ಯಾಕ್ಸಿ ಸೇರಿದಂತೆ ಹಲವು ವಾಹನಗಳು ಜಖಂ ಆಗಿವೆ. ಘಟನೆಯ ಪರಿಣಾಮ ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ.

ಸಾರಿಗೆ ಬಸ್ ಡಿಕ್ಕಿ: ಕೆಪಿಟಿಸಿಎಲ್ ಇಂಜಿನಿಯರ್ ದುರ್ಮರಣ:

ಸಾರಿಗೆ ಬಸ್ ಡಿಕ್ಕಿ: ಕೆಪಿಟಿಸಿಎಲ್ ಇಂಜಿನಿಯರ್ ದುರ್ಮರಣ

ಮಂಡ್ಯ: ಸಾರಿಗೆ ಬಸ್ (KSRTC Bus) ಡಿಕ್ಕಿಯಾಗಿ ಕೆಪಿಟಿಸಿಎಲ್ (ಟಿಎಲ್‍ಐ) ಇಂಜಿನಿಯರ್ ಒಬ್ಬರು ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಕಣಿಗಲ್ ಗೇಟ್ ಬಳಿ ನಡೆದಿದೆ. 

ಮೃತರನ್ನು ಮಳವಳ್ಳಿ ತಾಲೂಕಿನ ಮಂಚನಹಳ್ಳಿ ಗ್ರಾಮದ ಪಿ.ರವಿ (42) ಎಂದು ಗುರುತಿಸಲಾಗಿದೆ. ಶಿವನಸಮುದ್ರ ಬಳಿಯ ಕೆಪಿಟಿಸಿಎಸ್‍ನ (KPTCL) ವಿಭಾಗದಲ್ಲಿ ಕಿರಿಯ ಇಂಜಿನಿಯರ್ ಆಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಬೈಕ್‍ನಲ್ಲಿ ಮಳವಳ್ಳಿ ಪಟ್ಟಣಕ್ಕೆ ಹೋಗಿ ಮಂಚನಹಳ್ಳಿಗೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ