ಮಂಗಳೂರು(ಡಿ.09): ನಗರದ ಖಾಸಗಿ ಕಾಲೇಜೊಂದರ ವೇದಿಕೆ ಮೇಲೆ ನಾಲ್ವರು ವಿದ್ಯಾರ್ಥಿಗಳು ಬುರ್ಖಾ, ಹಿಜಾಬ್ ಧರಿಸಿ ಅಸಭ್ಯವಾಗಿ ನರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಾಲೇಜು ಆಡಳಿತ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ವಾಮಂಜೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬುಧವಾರ ಅಧಿಕೃತ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳು ಅಸಭ್ಯವಾಗಿ ನೃತ್ಯ ಮಾಡಿದ್ದಾರೆ. ವಿದ್ಯಾರ್ಥಿಗಳು ಅದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಇವರನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಆಂತರಿಕ ವಿಚಾರಣೆ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ.
ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ವೇದಿಕೆಯಲ್ಲಿ ಈ ನೃತ್ಯ ಮಾಡಿದ್ದು, ವಿದ್ಯಾರ್ಥಿಗಳು ಅದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ. ಕಾಲೇಜು ತನ್ನ ಆವರಣದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಇಂಥಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಎಂದು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಸುಧೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist