ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

ಮಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಸತತವಾಗಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳು, ಆಹಾರ ಪದಾರ್ಥಗಳು ನೀರು ಪಾಲಾಗಿದ್ದು, ರಸ್ತೆಗಳೆಲ್ಲ ನೀರು ತುಂಬಿಕೊಂಡು ಕೆರೆಯಂತಾಗಿದೆ.

ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

ಇಂದು ಮುಂಜಾನೆಯಿಂದ ಮೂರ್ನಾಲ್ಕು ಗಂಟೆ ನಿರಂತರವಾಗಿ ಸುರಿದ ಮಳೆಗೆ ಶಿವನಗರದಲ್ಲಿ ಐವತ್ತಕ್ಕೂ ಹೆಚ್ಚು ಮನೆಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ವಸ್ತಗಳೆಲ್ಲಾ ನೀರಿನಲ್ಲಿ ತೇಲಿದವು. ಎಲೆಕ್ಟ್ರಾನಿಕ್ ಉಪಕರಣಗಳು, ಹಾಸಿಗೆ, ಪಾತ್ರೆಗಳು, ಆಹಾರ ಪದಾರ್ಥಗಳೆಲ್ಲಾ ನೀರು ಪಾಲಾದವು. ಮನೆಯಿಂದ ನೀರು ಹೊರಹಾಕಲು ಇಲ್ಲಿನ ನಿವಾಸಿಗಳು ಹರಸಾಹಸಪಟ್ಟರು. ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿ ಇರಲಾಗದೆ ಮನೆಯಿಂದ ಹೊರ ಬಂದು ಕಾಲ ಕಳೆಯಬೇಕಾಯಿತು. ಸ್ಥಳಕ್ಕೆ ಮಹಾನಗರ ಪಾಲಿಕೆ ಸಿಬ್ಬಂದಿ ಆಗಮಿಸಿ ಕಸ ಕಟ್ಟಿಕೊಂಡಿದ್ದ ಡ್ರೈನೇಜ್, ಚರಂಡಿಗಳನ್ನು ಸ್ವಚ್ಛ ಮಾಡಿದರು. ಶಿವನಗರದ ರಸ್ತೆಗಳೆಲ್ಲೆಲ್ಲಾ ನೀರು ತುಂಬಿಕೊಂಡು ಕೆರೆಯಂತಾಗಿದ್ದರೆ, ವಾಹನಗಳು ನೀರಿನಲ್ಲಿ ತೇಲಿದವು.

ಮಂಗಳೂರಿನಲ್ಲಿ ಭಾರೀ ಮಳೆ – ಮನೆಗಳಿಗೆ ನುಗ್ಗಿತು ನೀರು, ನೀರಿನಲ್ಲಿ ತೇಲಾಡಿತು ಕಾರು

ಶಿವನಗರದಲ್ಲಿ ರಾಜಕಾಲುವೆ ಪಕ್ಕದಲ್ಲಿ ಮನೆಗಳಿದ್ದು ಮಳೆಗಾಲದಲ್ಲಿ ಕಾಲುವೆ ತುಂಬಿ ಹರಿದು ಮನೆಗಳಿಗೆ ನೀರು ನುಗ್ಗುತ್ತಿದೆ. ಈ ಬಗ್ಗೆ ಹತ್ತಾರು ಬಾರಿ ಜನಪ್ರತಿನಿಧಿಗಳು, ಮಹಾನಗರಪಾಲಿಕೆ ಗಮನಕ್ಕೆ ತಂದರೂ ಯಾರೂ ಕೂಡ ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿದಿಲ್ಲ. ಮನೆಗಳಿಗೆ ನೀರು ನುಗ್ಗಿದ ವೇಳೆ ಬಂದು ನೋಡಿ ಭರವಸೆ ನೀಡಿ ಹೋಗುತ್ತಿದ್ದು ಇನ್ನಾದರೂ ಈ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. 

ಮಳೆಯಿಂದ ಮನೆ, ಮನುಷ್ಯರು ಮಾತ್ರ ಸಂಕಷ್ಟಕ್ಕೆ ಸಿಲುಕಿಲ್ಲ. ಮೂಕ ಪ್ರಾಣಿಗಳು ಮಳೆಯಿಂದ ನರಳಾಡಿದವು. ಶಿವನಗರದ ಮನೆಯೊಂದರಲ್ಲಿ ಬೆಕ್ಕು ಮರಿಗಳನ್ನು ಹಾಕಿದ್ದು, ಮನೆಗೆ ನೀರು ನುಗ್ಗಿದ್ದರಿಂದ ಮರಿಗಳು ನೀರಿನಲ್ಲಿ ಮುಳುಗುತ್ತಿದ್ದು ತನ್ನ ಮರಿಗಳನ್ನು ರಕ್ಷಿಸಿಕೊಳ್ಳಲು ಪರದಾಡಿತು. ಬಾಯಲ್ಲಿ ಮರಿಗಳನ್ನು ಕಚ್ಚಿಕೊಂಡು ಮನೆಯಲ್ಲಿದ್ದ ಮಂಚದ ಮೇಲೆ ತಂದು ಬಿಟ್ಟು ಮರಿಗಳನ್ನು ರಕ್ಷಿಸಿತು. ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಜೆ.ಆರ್.ಲೋಬೋ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ