ಸೋಮವಾರ, ಏಪ್ರಿಲ್ 29, 2024
ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್‌‌ ಗೆ ಮತ್ತೆ ಹೊಸ ಟೆಂಡರ್‌?

Twitter
Facebook
LinkedIn
WhatsApp
ಮಂಗಳೂರಿನ  ಸುರತ್ಕಲ್ ಎನ್‌ಐಟಿಕೆ ಟೋಲ್‌ಗೇಟ್‌‌ ಗೆ ಮತ್ತೆ ಹೊಸ ಟೆಂಡರ್‌?

ಮಂಗಳೂರು: ಮುಂದಿನ ಒಂದು ವರ್ಷಕ್ಕೆ ಸುರತ್ಕಲ್‌ ಎನ್‌ಐಟಿಕೆ ಟೋಲ್‌ನಲ್ಲಿ ಶುಲ್ಕ ಸಂಗ್ರಹಕ್ಕೆ ಮತ್ತೆ ಟೆಂಡರ್‌ ಕರೆದಿರುವ ಮಾಹಿತಿ ಸರಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.

ಟೆಂಡರ್‌‌ನಲ್ಲಿ ವಾರ್ಷಿಕ ಬಿಡ್ 49.05 ಕೋಟಿ ಎಂದು ನಮೂದಿಸಲಾಗಿದೆ. ಸೆಂಟ್ರಲ್‌ ಇ ಪ್ರೊಕ್ಯೂರ್‌ವೆುಂಟ್‌ ಪೋರ್ಟಲ್‌ನಲ್ಲಿ ಮಾ. 23ರಂದು 6.45ಕ್ಕೆ ಹಾಕಲಾಗಿದ್ದು ಟೆಂಡರ್‌ ಹಾಕಲು ದಿನಾಂಕವನ್ನು ಅದೇ ದಿನ ನಿಗದಿ ಪಡಿಸಲಾಗಿದ್ದು ಎಪ್ರಿಲ್ 13ಕ್ಕೆ 11 ಗಂಟೆಗೆ ಕೊನೆಗೊಳ್ಳಲಿದ್ದು, ಎಪ್ರಿಲ್ 18ರಂದು ಟೆಂಡರ್‌ ಪರಿಶೀಲನೆ ನಡೆಯಲಿದೆ. ಎನ್‌ಎಚ್‌ಎಐನ ಕೇಂದ್ರ ಕಚೇರಿಯ ಕೆ.ವಿ. ಸಿಂಗ್‌ ಎನ್ನುವ ಅಧಿಕಾರಿಯ ಸಹಿಯಲ್ಲಿ ಹೊಸ ಟೆಂಡರ್‌ ಪ್ರಕಟವಾಗಿದೆ.

ಇನ್ನು ಹೊಸ ಟೆಂಡರ್‌ನಲ್ಲಿ ಶೇ 25ರಷ್ಟು ರಿಯಾಯಿತಿ ಗೊಂದಲ ಸೃಷ್ಟಿಸಿದ್ದು, ಎಲ್ಲ ರೀತಿಯ ವಾಹನಗಳಲ್ಲಿ ಪ್ರಯಾಣ ಮಾಡಿದವರು 24 ತಾಸಿನಲ್ಲಿ ಮರಳಿ ಬಂದಲ್ಲಿ ರಿಯಾಯಿತಿ ನೀಡಿದ್ದು, ಮರು ಪಾವತಿ ಬಗ್ಗೆ ಸ್ಪಷ್ಟನೆಯಿಲ್ಲ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು 60 ಕಿಮೀ ಅಂತರದಲ್ಲಿರುವ ಟೋಲ್‌ಗೇಟ್‌ಗಳನ್ನು ರದ್ದುಗೊಳಿಸುವುದಾಗಿ ಸಂಸತ್ತಿನಲ್ಲಿ ಹೇಳಿದ್ದರು. ಎನ್‌ಐಟಿಕೆ ಟೋಲ್‌ಗೇಟ್ ಅನ್ನು ನವಮಂಗಳೂರು ಪೋರ್ಟ್ ಟ್ರಸ್ಟ್‌ನೊಳಗೆ ಸ್ಥಳಾಂತರಿಸಲಾಗುವುದು ಎಂದು ಹೇಳಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೇ ಸಂಸ್ಥೆಯು ಗುತ್ತಿಗೆ ಪಡೆದು ಕಾಮಗಾರಿ ಮಾಡಿದ್ದಲ್ಲಿ ಮಾತ್ರ ಇದು ಅನ್ವಯ ಎನ್ನಲಾಗುತ್ತಿದೆ. ಅದರಂತೆ ತಲಪಾಡಿ. ಹೆಜಮಾಡಿ ಸಾಸ್ತಾನ ನಡುವೆ ಮೂರರಲ್ಲಿ ಒಂದು ಹಾಗೂ ಬ್ರಹ್ಮರಕೊಟ್ಲು, ಸುರತ್ಕಲ್‌ ಟೋಲ್‌ಗ‌ಳಲ್ಲಿ ಒಂದು ರದ್ದಾಗುವ ಸಂಭವವಿದೆ.
ಸುರತ್ಕಲ್ ಎನ್‌ಐಟಿಕೆ ಟೋಲ್ ಪ್ಲಾಜಾ ರದ್ದುಗೊಳಿಸುವಂತೆ ಆಗ್ರಹಿಸಿ ಹಲವು ಸಂಘಟನೆಗಳು ಇತ್ತೀಚೆಗೆ ಬೃಹತ್ ಪ್ರತಿಭಟನೆ ನಡೆಸಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಇತರ ಮುಖಂಡರು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ