ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಎಸ್ ಐ ಶರಣ್ಣಪ್ಪ ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣ್ಣಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್ ಕಳ್ಳತನದ ಆರೋಪಿ ಪಾವೂರಿನಲ್ಲಿ ಆತನ ಅತ್ತೆ ಮನೆಯಲ್ಲಿ ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದರು. ಕೃತ್ಯ ನಡೆಸಿದ ಆರೋಪಿ ಈ ಹಿಂದೆ ಕೂಡಾ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ.
ಹಿಂದಿನ ಪ್ರಕರಣದಲ್ಲಿ ಬೆಲೆಬಾಳುವ ವಾಚ್ ನ್ನು ಅಂಗಡಿಯೊಂದಕ್ಕೆ ಮಾರಾಟ ಮಾಡಲು ತೆರಳಿದ್ದ ಮಾಹಿತಿಯನ್ನು ಅಂಗಡಿ ಮಾಲಿಕರು ಪೊಲೀಸರಿಗೆ ತಿಳಿಸಿದ್ದ ಮಾಹಿತಿ ಆಧಾರದಲ್ಲಿ ನಗರ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ತೆರಳಿದ್ದಾಗ ಬಂದರು ಠಾಣಾ ಪೊಲೀಸ್ ಸಿಬಂದಿ ವಿನೋದ್ ಮತ್ತು ಪ್ರವೀಣ್ ಎಂಬವರಿಗೆ ಆರೋಪಿ ಹಲ್ಲೆ ಮಾಡಿ ವಿನೋದ್ ಅವರಿಗೆ ಚೂರಿಯಂತಹ ಆಯುಧದಿಂದ ಇರಿದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ.
ಆ ಬಳಿಕ ಆತ ಪಾವೂರಿನ ಅತ್ತೆ ಮನೆಯಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಎಸ್ ಐ ಶರಣ್ಣಪ್ಪ ಹಾಗೂ ಸಿಬ್ಬಂದಿ ಬುಧವಾರ ದಾಳಿ ಮಾಡಿದಾಗ ಆರೋಪಿ, ಎಸ್ ಐ ಶರಣ್ಣಪ್ಪ ಅವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿ ಪರಾರಿಯಾಗಿದ್ದಾನೆ, ಹಲ್ಲೆಯಿಂದ ಗಾಯಗೊಂಡಿರುವ ಶರಣಪ್ಪ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist