ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ

Twitter
Facebook
LinkedIn
WhatsApp
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (Mangaluru Airport) ಇನ್ಮುಂದೆ ಸೈಲೆಂಟ್‌ ಆಗಿ ತನ್ನ ಕಾರ್ಯ ಚಟುವಟಿಕೆ ನಡೆಸಲಿದೆ. ಇಂತಹದ್ದೊಂದು ಆದೇಶವನ್ನು ವಿಮಾನ ನಿಲ್ದಾಣದ ಅಧಿಕೃತ ಪ್ರಕಟಣೆ ತಿಳಿಸಿದೆ. ಪ್ರಯಾಣಿಕರು ಶಬ್ದರಹಿತ ಸಂದೇಶಗಳನ್ನಷ್ಟೇ ಪಡೆಯಬಹುದಾಗಿದೆ. ಆದರೆ, ವಿಮಾನದ ಸ್ಥಿತಿಗತಿ, ಪ್ರಕಟಣೆಗಳು ಎಲ್ಲವೂ ಡಿಸ್ಲೇ ಸಿಸ್ಟಂನಲ್ಲಿ (Display System) ಪ್ರದರ್ಶನಗೊಳ್ಳಲಿದೆ.

ಈ ಡಿಸ್ಲೇ ಮೂಲಕನೇ ವಿಮಾನ ಹಾರಾಟ, ಆಗಮನ ಸಮಯ ಹಾಗೂ ವಿಳಂಬ ಸ್ಥಿತಿಯ ಮಾಹಿತಿಯನ್ನ ಟಿವಿ ಪರದೆ ಮೂಲಕ ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿ ಡಿಸ್ಲೇ ಸಿಸ್ಟಂ ಅನ್ನು ವಿಮಾನ ನಿಲ್ದಾಣದ ಒಳಗೆ ಹಾಗೂ ಹೊರಗೆ ವ್ಯವಸ್ಥೆಗೊಳಿಸಲಾಗಿದೆ. ಇದಕ್ಕಾಗಿ ಬೃಹತ್‌ ಡಿಸ್ಲೇಗಳನ್ನು ಅಳವಡಿಸಲಾಗಿದೆ.

ಇದರ ಜೊತೆಗೆ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿರುವ ‘ಮೇ ಐ ಹೆಲ್ಪ್‌ ಯು’ ಡೆಸ್ಕ್‌, ಗ್ರಾಹಕ ಸೇವಾ ಸಿಬ್ಬಂದಿಗಳು, ‘ಪ್ರಣಾಮ್‌’ ಸಿಬ್ಬಂದಿಗಳು ಪ್ರಯಾಣಿಕರಿಗೆ ಅಗತ್ಯ ಮಾಹಿತಿ, ಸಹಾಯವನ್ನು ಮಾಡಲಿದ್ದಾರೆ. ಒಟ್ಟಿನಲ್ಲಿ ಶಬ್ದರಹಿತ ವಿಮಾನ ನಿಲ್ದಾಣವಾಗಿ ಬದಲಾಗಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಪ್ರಯಾಣಿಕರಿಗೆ ಅನಗತ್ಯ ಶಬ್ದದಿಂದ ಮುಕ್ತವಾಗಿಸಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ