ಮಂಗಳೂರು: ಖಾಸಗಿ ಹಾಗೂ ಸರ್ಕಾರಿ ಬಸ್‌ಗಳ ನಡುವೆ ಅಪಘಾತ - 30ಕ್ಕೂ ಅಧಿಕ ಮಂದಿಗೆ ಗಾಯ
Twitter
Facebook
LinkedIn
WhatsApp

ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಇನ್ನು ಘಟನೆಯಲ್ಲಿ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.