ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಗೋಲಿಬಾರ್ ಪ್ರಕರಣ; ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದ ಸರ್ಕಾರ

Twitter
Facebook
LinkedIn
WhatsApp
ಮಂಗಳೂರು ಗೋಲಿಬಾರ್ ಪ್ರಕರಣ; ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದ  ಸರ್ಕಾರ

ಮಂಗಳೂರು: ಕಳೆದ ಎರಡು ವರ್ಷಗಳ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರಿಗೆ ಕರ್ನಾಟಕ ಸರ್ಕಾರ ಕ್ಲೀನ್ ಚಿಟ್ ನೀಡಿದೆ.
2019ರ ಡಿಸೆಂಬರ್ 19ರಂದು ಮಂಗಳೂರಿನಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ನಡೆದ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟು, 9ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಲಭೆ ನಿಯಂತ್ರಣದ ವೇಳೆ ಪೊಲೀಸರು ಯಾವುದೇ ತಪ್ಪು ಮಾಡಿಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್‌ ಮುಂದೆ ಸಮರ್ಥಿಸಿಕೊಂಡಿದೆ.

ಸ್ವಾತಂತ್ರ್ಯ ಹೋರಾಟಗಾರ, ದಿವಂಗತ ಎಚ್ ಎಸ್ ದೊರೆಸ್ವಾಮಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆ. ಅಶ್ರಫ್ 2020ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಾಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರನ್ನು ಒಳಗೊಂಡ ವಿಭಾಗೀಯ ಪೀಠದ ಮುಂದೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಸರ್ಕಾರದ ಹೇಳಿಕೆ ಸಲ್ಲಿಸಿದರು.
ಈ ಗಲಭೆ ಕುರಿತು ನಡೆದ ನ್ಯಾಯಾಂಗ ತನಿಖೆ ವರದಿಯನ್ನು ಸರ್ಕಾರ ಅಂಗೀಕರಿಸಿದೆ. ಪೊಲೀಸರು ತೆಗೆದುಕೊಂಡ ಕ್ರಮದಲ್ಲಿ ಯಾವುದೇ ಲೋಪ ಕಂಡುಬಂದಿಲ್ಲ ಎಂದು ಚಿನ್ನಪ್ಪ ತಿಳಿಸಿದರು. ಯಾರಾದರೂ ತಪ್ಪಿತಸ್ಥರು ಎಂದು ಕಂಡುಬಂದಿದ್ದಾರೆಯೇ ಎಂಬ ಪ್ರಶ್ನೆಗೆ, ಚಿನ್ನಪ್ಪ ‘ಇಲ್ಲ’ ಎಂದು ಉತ್ತರಿಸಿದರು.
ಉಡುಪಿ ಜಿಲ್ಲಾಧಿಕಾರಿ ನಡೆಸಿದ್ದ ನ್ಯಾಯಾಂಗ ತನಿಖೆಯ ವರದಿಯನ್ನು ಈ ವರ್ಷದ ಜುಲೈ ತಿಂಗಳಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ಈ ವರದಿಯನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದರು.

ಶಾಂತಿಯುತ ಪ್ರತಿಭಟನೆ ಮೇಲೆ ಪೊಲೀಸ್ ದೌರ್ಜನ್ಯ ಎಸಗಿರುವುದಕ್ಕೆ ಸಂಬಂಧಿಸಿದಂತೆ ಹತ್ತು ದೂರುಗಳು ಪೊಲೀಸರ ವಿರುದ್ಧ ದಾಖಲಾಗಿವೆ. ಎಫ್‌ಐಆರ್ ದಾಖಲಿಸುವ ಸಂಬಂಧ ಹಾಗೂ ಕಾನೂನಿಗೆ ಅನುಗುಣವಾಗಿ ತನಿಖೆ ನಡೆಸುವ ಕುರಿತು ಹೈಕೋರ್ಟ್‌ನಿಂದ ಸಕಾರಾತ್ಮಕ ನಿರ್ದೇಶನ ಬಂದಿತ್ತು. ಯಾವುದೇ ಪ್ರಕರಣ/ಎಫ್‌ಐಆರ್ ದಾಖಲಾಗಿಲ್ಲ ಮತ್ತು ತನಿಖೆ ನಡೆದಿಲ್ಲ. ಮ್ಯಾಜಿಸ್ಟ್ರೇಟ್ ಮುಂದೆ ಯಾವುದೇ ಆರೋಪಪಟ್ಟಿ ದಾಖಲಾಗಿಲ್ಲ. ಒಂದೇ ಒಂದು ದೂರನ್ನು ಪರಿಶೀಲಿಸಲಾಗಿಲ್ಲ. ಇದು ಪೊಲೀಸರು, ಪೊಲೀಸರಿಂದ, ಪೊಲೀಸರಿಗಾಗಿ ರೂಪಿಸಿದ ವರದಿ ಎಂದು ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಆರೋಪಿಸಿದರು.
‘ನಾವು ಪ್ರತಿ ದೂರನ್ನೂ ತನಿಖೆ ಮಾಡಿದ್ದೇವೆ. ಮೊದಲು ಸಿಐಡಿ ತನಿಖೆ ನಡೆದಿದೆ. ಬಳಿಕ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಯಾವುದೇ ದೌರ್ಜನ್ಯ ನಡೆಸಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ನ್ಯಾಯಾಲಯಕ್ಕೆ ಪ್ರತಿಯೊಂದು ವಿವರವನ್ನೂ ಮುಚ್ಚಿದ ಲಕೋಟೆಯಲ್ಲಿ ನೀಡಲಾಗಿದೆ’ ಎಂದು ಚಿನ್ನಪ್ಪ ಮಾಹಿತಿ ನೀಡಿದರು.

ದೂರುಗಳನ್ನು ಸ್ವೀಕರಿಸುವಲ್ಲಿ ಹಾಗೂ ವಿಚಾರಣೆಗಳನ್ನು ನಡೆಸುವಲ್ಲಿ ಅಳವಡಿಸಿಕೊಂಡ ಪ್ರಕ್ರಿಯೆ ಬಗ್ಗೆ ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿತು. ಬಳಿಕ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು