ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಪ್ರಕರಣ ; ಪೊಲೀಸರಿಂದ ಶಂಕಿತನ ಫೋಟೋ ಬಿಡುಗಡೆ

Twitter
Facebook
LinkedIn
WhatsApp
ms 070223 killer1

ಮಂಗಳೂರು, ಫೆ 07 : ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ

ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಅದನ್ನು ಪೊಲೀಸರಿಗೆ ನೀಡುವಂತೆ ಕೋರಲಾಗಿದ್ದು ಮಾಹಿತಿದಾರರ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜುವೆಲ್ಯರಿಯೊಂದಕ್ಕೆ ಹಾಡುಹಗಲೇ ನುಗ್ಗಿದ್ದ ದುಷ್ಕರ್ಮಿ ಸಿಬಂದಿ ರಾಘವ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ