
ಮಂಗಳೂರು: ಬೈಕ್ ಸ್ಟಂಟ್ ಹಾಗೂ ವಿಲೀಂಗ್ ಸ್ಟಂಟ್ ಮಾಡಿದ ಹಿನ್ನೆಲೆಯಲ್ಲಿ ಆರು ಮಂದಿಯ ವಿರುದ್ಧ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಲ್ಯಾಸ್ ಝಿಯಾನ್ ಎಂಬಾತ ಮಾ.1ರಿಂದ 6ರವರೆಗೆ ನೋಂದಣಿ ಸಂಖ್ಯೆ ಇಲ್ಲದ ಬೈಕ್‌ನಲ್ಲಿ ಇಬ್ಬರನ್ನು ಕುಳ್ಳಿರಿಸಿಕೊಂಡು ತೊಕ್ಕೊಟ್ಟು ಓವರ್ ಬ್ರಿಡ್ಜ್‌ನಿಂದ ಉಳ್ಳಾಲಬೈಲ್‌ವರೆಗೆ ಹಾಗೂ ನಾಗುರಿಯಿಂದ ಸಂಚಾರ ದಕ್ಷಿಣ ಪೊಲೀಸ್ ಠಾಣೆಯವರೆಗೆ ವಿಲೀಂಗ್ ಸ್ಟಂಟ್ ಮಾಡುತ್ತಾ ಅಡ್ಡಾದಿಡ್ಡಿಯಾಗಿ ಇತರ ವಾಹನಗಳು, ಪಾದಚಾರಿಗಳಿಗೆ ಅಪಾಯ ಉಂಟಾಗುವ ರೀತಿಯಲ್ಲಿ ಸವಾರಿ ಮಾಡುತ್ತಿದ್ದ. ಈ ಕುರಿತಾದ ವೀಡಿಯೋವನ್ನು ಮಾ.10ರಂದು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ. ಇದು ವೈರಲ್ ಆಗಿ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿತ್ತು. ಪೊಲೀಸರು ಇಲ್ಯಾಸ್, ಬೈಕ್ ಮಾಲಕ ಮತ್ತು ವಿಲೀಂಗ್ ಸ್ಟಂಟ್‌ನ್ನು ವೀಡಿಯೊ ಮಾಡಿದ್ದ ಸಫ್ವಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಗರ ಹೊರವಲಯದ ಅಡ್ಯಾರ್ ಸಮೀಪ ಮಾ.10ರಂದು ಬೈಕ್‌ನಲ್ಲಿ ವಿಲೀಂಗ್ ಮಾಡುತ್ತಿದ್ದ ಆರೋಪದ ಮೇರೆಗೆ ಕಿಶನ್ ಶೆಟ್ಟಿ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರ ವೀಡಿಯೋ ಕೂಡ ವೈರಲ್ ಆಗಿ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿತ್ತು.
ಉಳ್ಳಾಲದಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುತ್ತಿದ್ದ ತೌಸೀಫ್ ವಿರುದ್ಧ ಹಾಗೂ ವಾಮಂಜೂರಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವಿಲೀಂಗ್ ಮಾಡುತ್ತಿದ್ದ ಆನೀಝ್ ಎಂಬಾತನ ವಿರುದ್ಧ ಪ್ರಕರಣ
ದಾಖಲಿಸಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist