ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ನಿರ್ಮಾಣ ಹಂತದ ಕಟ್ಟಡ ಸ್ಲಾಬ್ ಕುಸಿದು ವ್ಯಕ್ತಿ ಸಾವು, ಇಬ್ಬರು ಗಂಭೀರ

Twitter
Facebook
LinkedIn
WhatsApp

ಮಂಗಳೂರು: ನಿರ್ಮಾಣ ಹಂತದ ಕಟ್ಟಡದ ಸ್ಲಾಬ್ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಉರ್ವಾ ಮಾರಿಗುಡಿ ದೇವಸ್ಥಾನದ ಬಳಿ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗೋವಾ ಮೂಲದ ಸಲೀಂ ಶೇಖ್ (45) ಮೃತಪಟ್ಟವರು. ಈತ ಕೆಲ ದಿನಗಳ ಹಿಂದಷ್ಟೇ ಕೆಲಸ ಕೇಳಿಕೊಂಡು ಗೋವಾದಿಂದ ಮಂಗಳೂರಿಗೆ ಬಂದಿದ್ದ ಎನ್ನಲಾಗಿದೆ.

ಮಾರಿಗುಡಿ ದೇವಳದ ಬಳಿ ಬಂಗಲೆ ಮಾದರಿಯ ಮನೆ ನಿರ್ಮಾಣವಾಗುತ್ತಿದ್ದು, ಕಾಂಕ್ರಿಟ್ ಸ್ಲಾಬ್‌ ಗಟ್ಟಿಯಾಗಿ ನಿಲ್ಲಲು ನಿಲ್ಲಿಸಿದ್ದ ಕಂಬಗಳನ್ನು ತೆರವು ಮಾಡುತ್ತಿದ್ದಾಗ ಸ್ಲಾಬ್ ಕುಸಿದು ಬಿದ್ದಿದೆ. ಸ್ಲಾಬ್ ಅಡಿಗೆ ಬಿದ್ದ ಸಲೀಂ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದು, ತತ್‌ಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಕಂಬ ತೆರವು ಮಾಡುತ್ತಿದ್ದ ಕಾವೂರು ಪಂಜಿಮೊಗರು ನಿವಾಸಿ ಕಿರಣ್ ಮತ್ತು ಶಿವಮೊಗ್ಗ ಸೊರಬದ ಹನುಮಂತ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಮಗಾರಿಯಲ್ಲಿ ಲೋಪ ಆಗಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಉರ್ವ ಠಾಣೆಯ ಪೊಲೀಸರು ಆಗಮಿಸಿದ್ದು, ಸದ್ಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಲಾಗಿದೆ.
ಮಂಗಳೂರಿನಲ್ಲಿ ಉದ್ಯಮಿಯಾಗಿರುವ ಗುಜರಾತ್ ಮೂಲದ ರುಗುನಾಥ್ ಶರ್ಮ ಎಂಬವರಿಗೆ ಸೇರಿದ ಸೈಟ್ ಇದಾಗಿದ್ದು, ಸ್ಥಳದಲ್ಲಿ ಬಂಗಲೆ ನಿರ್ಮಾಣವಾಗುತ್ತಿದೆ. ಮಹೇಶ್ ಕಾಮತ್ ಕಾಮಗಾರಿಯ ಗುತ್ತಿಗೆ ನಡೆಸುತ್ತಿದ್ದಾರೆ. ನಿರ್ಲಕ್ಷ್ಯ ಸಂಬಂಧ ಮನೆ ಮಾಲಕ, ಕಾಂಟ್ರಾಕ್ಟರ್‍ ಮತ್ತು ಸೈಟ್ ಸೂಪರ್‌ವೈಸರ್ ವಿರುದ್ದ ಸೆಕ್ಷನ್ 304 ಎ ಮತ್ತು 338 ಅಡಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ