ಮಂಗಳೂರು: ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ಬಂಟ್ವಾಳ ಮೂಲದ ವ್ಯಕ್ತಿಯ ಹತ್ಯೆ - ಆರೋಪಿಯ ಬಂಧನ
Twitter
Facebook
LinkedIn
WhatsApp
ಮಂಗಳೂರಿನಲ್ಲಿ ಬಂಟ್ವಾಳ ತಾಲೂಕಿನ ಪೊಳಲಿ ಮೂಲದ ವ್ಯಕ್ತಿಯೋರ್ವನ ಕೊಲೆಯಾಗಿದ್ದು, ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಆರೋಪಿಗಳ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ
ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಜನಾರ್ದನ ಬಾರಿಂಜ ಅವರು ಕೊಲೆಯಾದ ವ್ಯಕ್ತಿ. ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ರಾಬರಿ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಜನಾರ್ದನ ಬಾರಿಂಜ ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸಕ್ರೀಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ. ವೃತ್ತಿಯಲ್ಲಿ ಚಾಲಕನಾಗಿದ್ದು, ನಿನ್ನೆ ಮಧ್ಯಾಹ್ನ ವೇಳೆ ಮಂಗಳೂರಿನ ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದರು ಎನ್ನಲಾಗಿದೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.