ಮಂಗಳೂರು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿವಾಹಿತ ಮಹಿಳೆ
Twitter
Facebook
LinkedIn
WhatsApp
ಮಂಗಳೂರು: ವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಸಮೀಪ ಮಾಡೂರು ಎಂಬಲ್ಲಿ ನಡೆದಿದೆ.
ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್- ಗಿರಿಜಾ ದಂಪತಿಯ ಪುತ್ರಿ, ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ ಮೃತಪಟ್ಟವರು.
ಜ.21ರಂದು ದಿವ್ಯಾ ಪತಿ ಹರೀಶ್ ಜೊತೆ ನೆರೆಮನೆಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ತೆರಳಿದ್ದು, ಈ ವೇಳೆ ಪತಿ- ಪತ್ನಿ ನಡುವೆ ಮನಸ್ತಾಪ ಉಂಟಾಗಿತೆನ್ನಲಾಗಿದೆ. ಇದರಿಂದ ಬೇಸರಗೊಂಡ ದಿವ್ಯಾ ಒಬ್ಬರೇ ಮನೆಗೆ ಹಿಂದಿರುಗಿದ್ದರು. ಈ ವಿಚಾರವಾಗಿ ಅಸಮಾಧಾನಗೊಂಡಿದ್ದ ದಿವ್ಯಾ ಜೀವನದಲ್ಲಿ ಜಿಗುಪ್ಪೆಗೊಂಡು ಜ.22ರಂದು ಸಂಜೆ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ದಿವ್ಯಾ ಒಂದೂವರೆ ವರ್ಷದ ಹಿಂದೆ ಹರೀಶ್ ರನ್ನು ಪ್ರೀತಿಸಿ ವಿವಾಹವಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.