ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ನೋಟಿನ ಬಂಡಲ್ ಪತ್ತೆ ಪ್ರಕರಣ - ವಾರಸುದಾರ ಪೊಲೀಸ್ ಠಾಣೆಗೆ ಹಾಜರ್

Twitter
Facebook
LinkedIn
WhatsApp
ಮಂಗಳೂರು: ನೋಟಿನ ಬಂಡಲ್ ಪತ್ತೆ ಪ್ರಕರಣ – ವಾರಸುದಾರ ಪೊಲೀಸ್ ಠಾಣೆಗೆ ಹಾಜರ್

ಮಂಗಳೂರು, ಡಿ.13 : ಪಂಪ್‌ವೆಲ್‌ನಲ್ಲಿ ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್‌ಗಳು ನವಂಬರ್ 26ರಂದು ಶಿವರಾಜ್ ಮತ್ತು ತುಕಾರಾಮ್ ಎಂಬವರಿಗೆ ಸಿಕ್ಕಿದ್ದು, ಶಿವರಾಜ್ ಬಳಿ ಇದ್ದ 49,000 ರೂ.ಗಳನ್ನು ಪೊಲಿಸರು ವಶಪಡಿಸಿಕೊಂಡಿದ್ದರು. ಆದರೆ ಇದೀಗ ವ್ಯಕ್ತಿಯೊಬ್ಬರು ಠಾಣೆಗೆ ತೆರಳಿ ತಾನೇ ಆ ಹಣದ ವಾರಸುದಾರ ಎಂದು ಹೇಳಿಕೊಂಡಿದ್ದು ತನಿಖೆ ನಡೆಯುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ