ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: 'ಬಿಎಸ್ ಡಬ್ಲ್ಯೂಟಿ' ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ

Twitter
Facebook
LinkedIn
WhatsApp
DJI 0135 1

ಮಂಗಳೂರು, ಜ 20 : ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ ಬೋಳಾರ್ ಅವರು ತುಳು ನಾಟಕ, ಚಲನಚಿತ್ರ ಮತ್ತು ಯಕ್ಷಗಾನ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾ ಪಾತ್ರದಲ್ಲಿಯೂ ಸೈ ಎನಿಸಿಕೊಂಡವರು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ ಮಗನಾಗಿ ಜನಿಸಿದ ಇವರು ತುಳು ನಾಟಕ ಕಲಾವಿದನಾಗಿ ಸಾಂಸ್ಕೃತಿಕ ರಂಗ ಪ್ರವೇಶಿಸಿದರು. ಹಾಗೂ ತುಳು ಚಲನಚಿತ್ರ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಕಾಮಿಕ್ ಟೈಮಿಂಗ್ ಮತ್ತು ಪಂಚಿಂಗ್ ಡೈಲಾಗ್‌ಗಳಿಂದ ಅವರು ಕರಾವಳಿ ನಾಟಕ ಉದ್ಯಮದಲ್ಲಿ ಮತ್ತು ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಸಹಿಯನ್ನು ರಚಿಸಿಕೊಂಡಿರುವ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಜೊತೆಗೆ “ಸಾಧನೆ ಶಾರದಾರ್” ಮತ್ತು “ತುಳುವ ಮಾಣಿಕ್ಯ” ಎಂಬ ಬಿರುದು ಗಳಿಸಿದ್ದಾರೆ ಅದಲ್ಲದೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ೫೦೦ ಕ್ಕೂ ಹೆಚ್ಚು ಗೌರವಗಳು ಸಂದಿವೆ.

ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರೊಂದಿಗೆ ಜೋಡಿಯಾಗಿ, ಸಾಮಾನ್ಯ ಜನರ ನೋವುಗಳನ್ನು ಅರಿತು ಅವರಂತೆ ಪಾತ್ರಾಭಿನಯಿಸಿ ದಾಯ್ಜಿವಲ್ಡ್ ಟಿವಿ ಶೋ “ಪ್ರೈವೇಟ್ ಚಾಲೆಂಜ್ ” ಎಂಬ ಹೊಸ ಪ್ರಯೋಗದ ಮುಖಾಂತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಇದು ಹೆಚ್ಚು ಪ್ರಯೋಜನಕಾರಿಯದ ಬೆಳವಣಿಗೆಯಾಗಿ ಗುರುತಿಸಲಾಗಿದ್ದು ಸಮಾಜದ ಕಣ್ಣು ತೆರೆಯಿತು.

ಅವರ ಸಾಮಾಜಿಕ ಬದ್ಧತೆಯನ್ನು ಪರಿಗಣಿಸಿ ಭಾರತ್ ಸೋಶಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಅವರನ್ನು ವರ್ಷದ ವ್ಯಕ್ತಿಯಾಗಿ ಆಯ್ಕೆ ಮಾಡಿದೆ. ಭಾರತ್ ಸೋಶಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಈ ಮೂರು ಕೇಂದ್ರೀಯ ವಿಷಯಗಳಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ನಾಟಕದಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಪ್ರತೀ ವರ್ಷ ನೂರೈವತ್ತು ಅರ್ಹ ಬಡಾ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜನವರಿ 26- 2023 ರಂದು ಸಂಜೆ 3.00 ಗಂಟೆಗೆ ಸರಿಯಾಗಿ ಸಹೋದಯ ಸಭಾಂಗಣ ಬಲ್ಮಟ ಮಂಗಳೂರು ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅರವಿಂದ್ ಬೋಳಾರ್ ಅವರಿಗೆ “ವರ್ಷದ ವ್ಯಕ್ತಿ” ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ