ಮಂಗಳೂರು: ಬೆಂಕಿಗಾಹುತಿಯಾದ ಮನೆ - ದಿಕ್ಕುತೋಚದಂತಾಗಿದೆ ಬಡ ಕುಟುಂಬ
Twitter
Facebook
LinkedIn
WhatsApp
ಮಂಗಳೂರು, ಜ 23 : ಕಾವೂರಿನ ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಢ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ಸೋಮವಾರ ನಡೆದಿದೆ.
ಇಂದಿರಾ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಸೋಮವಾರ ಬೆಳಗ್ಗೆ ಮನೆಮಂದಿಯೆಲ್ಲಾ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಇನ್ನು ಸ್ಥಳೀಯರು, ಅಗ್ನಿಶಾಮಕ ದಳದ ನೆರವಿನಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಕಿ ನಂದಿಸಲಾಗಿದೆ.