ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಮುಂದುವರಿದ ಬಿಸಿಲಿನ ಝಳ - ಕಡಲಬ್ಬರ ಹೆಚ್ಚಾಗುವ ಸಾಧ್ಯತೆ

Twitter
Facebook
LinkedIn
WhatsApp
sun burn

ಮಂಗಳೂರು, ಮಾ 08 : ಕರಾವಳಿಯಲ್ಲಿ ಬಿಸಿಲಿನ ಝಳ ಮುಂದುವರಿದಿದೆ. ಜಿಲ್ಲೆಯಲ್ಲಿ ದಿನವಿಡೀ ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮಂಗಳೂರಿನಲ್ಲಿ ಗರಿಷ್ಟ 23.1 ಡಿಗ್ರಿ ದಾಖಲಾಗಿದೆ. ಕನಿಷ್ಟ 21.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬಂದಿದ್ದು ಸಾಮಾನ್ಯ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದೆ. ಇದೇ ರೀತಿಯ ತಾಪಮಾನ ಈ ವಾರ ಪೂರ್ತಿ ಮುಂದುವರಿಯುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.

ಇದಲ್ಲದೆ ಮಾರ್ಚ್ 8ರಂದು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

ಬಿಸಿ ಗಾಳಿಯ ಹಿನ್ನೆಲೆಯಲ್ಲಿ ಮಾರ್ಚ್ 08 ರಂದು ರಾತ್ರಿವರೆಗೆ ಸಮುದ್ರ ತೀರದಲ್ಲಿ 1.5 ಮೀಟರ್ ನಿಂದ 2.3 ಮೀಟರ್ ವರೆಗೆ ಅಲೆಗಳ ಅಬ್ಬರ ಇರುವ ನಿರೀಕ್ಷೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ