ಮಂಗಳೂರು: ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಮಾರಿ ; 144 ಸೆಕ್ಷನ್ ಜಾರಿ!
ಮಂಗಳೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದ್ದು, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ಮಂಗಳೂರು ಹೊರವಲಯದ ಮುಡುಶೆಡ್ಡೆಯಲ್ಲಿ ನಡೆದಿದೆ. ಚುನಾವಣಾ ಪಕ್ಷದ ಬೂತ್ಗೆ ಅಭ್ಯರ್ಥಿ ಮಿಥುನ್ ರೈ ಬಂದಾ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದರೆ. ಎರಡು ಪಕ್ಷದ ಕಾರ್ಯಕರ್ತರಿಂದ ಪರ ವಿರೋಧ ಘೋಷಣೆ ಹಿನ್ನೆಲೆ ಮಾರಾಮಾರಿಗೆ ಕಾರಣವಾಗಿದೆ. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಈ ಕುರಿತು ಮಾತನಾಡಿದ್ದು, ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಪರಸ್ಪರ ಘೋಷಣೆ ಕೂಗಿದ ವೇಳೆ ಗಲಾಟೆ ಆಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಿಸಿ ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೂಡುಶೆಡ್ಡೆಯಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸುತ್ತೇವೆ. ಬರುವ ಮತ್ತು ಹೊರಗಿನ ವಾಹನಗಳ ಮೇಲೆ ನಿಗಾ ಇಡಲಾಗಿತ್ತೆ. ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿವೆ. ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಹೇಳಿದರು.